ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮೋದಿ ಹೆಸರಿನಲ್ಲಿ ಪೂಜೆ ಮಾಡಿಸಿದ ಶಾಸಕ ಜಿಟಿಡಿ

5:34 PM, Tuesday, September 17th, 2019
Share
1 Star2 Stars3 Stars4 Stars5 Stars
(No Ratings Yet)
Loading...

GTDಮೈಸೂರು : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ. ಈ ಕಾರಣಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವಿಶೇಷ ಪೂಜೆ ನಡೆಸಿದ್ದಾರೆ. ಜೆಡಿಎಸ್ ಶಾಸಕ, ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರೂ ಈ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ವಿ. ಸೋಮಣ್ಣ ಅವರೊಂದಿಗೆ ಸಂಸದ ಪ್ರತಾಪ್ ಸಿಂಹ, ಎಲ್. ನಾಗೇಂದ್ರ ಅವರು ಇದ್ದರು. ಬಿಜೆಪಿ ನಾಯಕರೊಂದಿಗೆ ಬಂದಿದ್ದ ಜಿ.ಟಿ.ದೇವೇಗೌಡರು ಎಲ್ಲರೊಂದಿಗೆ ಪೂಜೆಯಲ್ಲಿ ಭಾಗಿಯಾಗಿದ್ದರು. ಮೋದಿ ಹೆಸರಿನಲ್ಲಿ ವಿಶೇಷ ಪೂಜೆಯನ್ನೂ ಮಾಡಿಸಿ ಮೋದಿಗೆ ಶುಭ ಹಾರೈಸಿದ್ದಾರೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English