ಬೆಳ್ತಂಗಡಿ ಸಮೀಪ 51 ಕೆ.ಜಿ.ಯ 10 ಆನೆ ದಂತ ವಶ

8:55 PM, Wednesday, September 18th, 2019
Share
1 Star2 Stars3 Stars4 Stars5 Stars
(No Ratings Yet)
Loading...

Dantaಬೆಳ್ತಂಗಡಿ : ಪುತ್ತೂರು ಸಂಚಾರಿ ಅರಣ್ಯ ದಳ( ಎಫ್.ಎಂ.ಎಸ್.) ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ  ಸುರ್ಯ ರಸ್ತೆಯ ಮನೆಯೊಂದರಲ್ಲಿ ದಾಸ್ತಾನಿರಿಸಿದ್ದ 51ಕೆ.ಜಿ. ಆನೆ ದಂತ ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಸುರ್ಯ ಸಮೀಪದ ಮನೆಯೊಂದಕ್ಕೆ ದಾಳಿ ನಡೆಸಿ 51 ಕೆ.ಜಿ.ಯ 10 ಆನೆ ದಂತ ವಶಕ್ಕೆ ಪಡೆದಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಕಳೆದ ಮೂರು ತಿಂಗಳಿಂದ ಆನೆ ದಂತ ದಾಸ್ತಾನು ಇರಿಸಿದ್ದು ಮಾತ್ರವಲ್ಲದೆ ಮಾರಾಟ ಜಾಲದ ಕುರಿತು ಇಲಾಖೆಗೆ ಮಾಹಿತಿ ಲಭಿಸಿತ್ತು.

ಸುರ್ಯ ದೇವಸ್ಥಾನ ರಸ್ತೆಯ ಅಬ್ರಾಹಂ, ಅನ್ವರ್, ಸುರೇಶ್ ಬಾಬು ಎಂಬುವರನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಮತ್ತೋರ್ವ ತಲೆ ಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.ಈ ನಾಲ್ವರು ಹಲವಾರು ವರ್ಷಗಳಿಂದ ಇದೇ ಕೃತ್ಯದಲ್ಲಿ ತೊಡಗಿದ್ದರು ಎನ್ನಲಾಗಿದ್ದು, ಕೇರಳದಿಂದ ಆನೆ ದಂತ ತಂದಿರುವ ಕುರಿತಾಗಿ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಒಟ್ಟು 5 ಜೋಡಿ ದಂತ ವಶಕ್ಕೆ ಪಡೆಯಲಾಗಿದೆ.

ಪುದುವೆಟ್ಟು ಅರಣ್ಯದಲ್ಲಿ ಆನೆಯೊಂದನ್ನು ಹೊಡೆದುರುಳಿಸಿ ದಂತ ಎಗರಿಸಿರುವ ಕುರಿತು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದ್ದು, 8 ವರ್ಷ ಹಳೆಯ ದಂತವೂ ಸೇರಿದೆ.

ಓರ್ವ ಗಲ್ಫ್ ರಾಷ್ಟ್ರ ದಲ್ಲಿ ಉದ್ಯೋಗದಲ್ಲಿದ್ದು ಬಳಿಕ ಊರಿಗೆ ಬಂದು ದಂತ ಸಾಗಾಟ ಕೃತ್ಯದಲ್ಲಿ ತೊಡಗಿಕೊಂಡಿದ್ದಾನೆ.ಪ್ರಕರಣದ ಹಿಂದೆ ದೊಡ್ಡ ಜಾಲವೊಂದು ಇರುವ ಕುರಿತು ಇಲಾಖೆ ಅನುಮಾನ ವ್ಯಕ್ತಪಡಿಸಿದೆ.ಬೆಳ್ತಂಗಡಿ ಅರಣ್ಯ ಇಲಾಖೆಗೆ ಪ್ರಕರಣದ ಮುಂದಿನ ತನಿಖೆಗೆ ಹಸ್ತಾಂತರಿಸಲಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English