ಕಲಬುರಗಿ : ಯುವಕನೋರ್ವನನ್ನು ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದಲ್ಲಿ ನಡೆದಿದೆ.
ಪ್ರಶಾಂತ್ ಕೊಟರಗಿ (28) ಕೊಲೆಯಾದ ಯುವಕ. ನಗರದ ಹೊರವಲಯದ ಅಫಜಲ್ಪುರ ರಸ್ತೆಯ ಖರ್ಗೆ ಕಾಲೋನಿಯ ಮನೆಯೊಂದರಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಪ್ರಶಾಂತ ತನ್ನ ಸ್ನೇಹಿತರೊಡನೆ ಪಾರ್ಟಿ ಮಾಡುತ್ತಿದ್ದ. ಈ ವೇಳೆ ಯಾವುದೋ ವಿಷಯಕ್ಕೆ ಜಗಳವಾಗಿದೆ. ಇದೇ ಕೋಪದಲ್ಲಿ ಪ್ರಶಾಂತ್ ನ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಇಂದು ಬೆಳಿಗ್ಗೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹೇಶ ಮತ್ತು ವಿನೋದ ಕೊಲೆ ಆರೋಪಿಗಳೆಂದು ಗುರುತಿಲಾಗಿದೆ.
ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Click this button or press Ctrl+G to toggle between Kannada and English