- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಡಿಕೆಶಿ ಅಕ್ರಮ ಆಸ್ತಿ ಪ್ರಕರಣ : ಇಂದು ಲಕ್ಷ್ಮಿ ಹೆಬ್ಬಾಳ್ಕರ್​ ವಿಚಾರಣೆ

Lakshimi-hebbalkar [1]ಬೆಳಗಾವಿ : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಜತೆಗಿನ ವ್ಯಾವಹಾರಿಕ ಸಂಬಂಧ ಆರೋಪದಡಿ, ಬೆಳಗಾವಿ ಗ್ರಾಮೀಣ ‌ಶಾಸಕಿ‌‌ ಲಕ್ಷ್ಮಿ‌ ಹೆಬ್ಬಾಳ್ಕರ್ ಎರಡನೇ ದಿನವಾದ ಇವತ್ತೂ ಜಾರಿ ನಿರ್ದೇಶನಾಲಯ ಕಚೇರಿಗೆ ತೆರಳಿ ವಿಚಾರಣೆ ಎದುರಿಸಲಿದ್ದಾರೆ.

ಬೆಂಗಳೂರಿನಿಂದ ನಿನ್ನೆ ಬೆಳಗ್ಗೆ ದೆಹಲಿಗೆ ಹೋಗಿದ್ದ ಹೆಬ್ಬಾಳ್ಕರ್ ಇಡಿ ಅಧಿಕಾರಿಗಳು ನಡೆಸಿದ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಅಗತ್ಯತೆ ಇನ್ನೂ ಇದ್ದು, ಶನಿವಾರ ಮಧ್ಯಾಹ್ನ 12ಕ್ಕೆ ಆಗಮಿಸುವಂತೆ ಹೆಬ್ಬಾಳ್ಕರ್ಗೆ ಇಡಿ ಅಧಿಕಾರಿಗಳು ನಿರ್ದೇಶನ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ಬಾಳ್ಕರ್ ಇಂದು ಕೂಡಾ ಇಡಿ ಕಚೇರಿಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಲಿದ್ದಾರೆ.

ನೋಟು ಅಮಾನ್ಯೀಕರಣ ‌ಸಂದರ್ಭದಲ್ಲಿ‌ ಡಿಕೆಶಿ ಅಕೌಂಟ್ ನಿಂದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕುಟುಂಬ ಸದಸ್ಯರ ಖಾತೆಗೆ ಹಣ ವರ್ಗಾವಣೆ ಆಗಿರುವ ದಾಖಲೆಗಳು ಇಡಿಗೆ ಲಭ್ಯವಾಗಿದೆ. ಅಲ್ಲದೇ ಹೆಬ್ಬಾಳ್ಕರ್ ಕುಟುಂಬ ಸದಸ್ಯರು ಡಿಕೆಶಿ ‌ಜತೆಗೆ ವ್ಯಾವಹಾರಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗುತ್ತಿದೆ. ಡಿಕೆಶಿ ಜತೆಗಿನ ವ್ಯಾವಹಾರಿಕ ಸಂಬಂಧದ ಹಿನ್ನೆಲೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೋಳಿಗೂ ಇಡಿ‌ ಸಮನ್ಸ್ ‌ಜಾರಿಗೊಳಿಸುವ ಸಾಧ್ಯತೆ ಇದೆ.