ದ್ವಿತೀಯಾರ್ಧದಲ್ಲಿ ದೇಶದ ಆರ್ಥಿಕತೆಯ ಬೆಳವಣಿಗೆ : ನಿರ್ಮಲಾ ಸೀತಾರಾಮನ್‌

12:09 PM, Friday, September 27th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

nirmala-seetharamanಹೊಸದಿಲ್ಲಿ : ದೇಶದ ಆರ್ಥಿಕತೆಯು ಪ್ರಸ್ತುತ ಆರ್ಥಿಕ ವರ್ಷದ ದ್ವಿತೀಯಾರ್ಧದ ನಂತರ ಮೇಲೇರಲಿದೆ ಎಂಬ ಆಶಾವಾದವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವ್ಯಕ್ತಪಡಿಸಿದ್ದಾರೆ.

ಗುರುವಾರ, ಖಾಸಗಿ ಹಣಕಾಸು ಸಂಸ್ಥೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿದ ಅವರು, “”ದೇಶದಲ್ಲಿ ನೋಟುಗಳ ಚಲಾವಣೆಯ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಈಗಲೂ ಬ್ಯಾಂಕುಗಳ ಸಾಲಗಳಿಗೆ ಸಾಕಷ್ಟು ಬೇಡಿಕೆಯಿದೆ. ದ್ವಿತೀಯಾರ್ಧದಲ್ಲಿ ಉತ್ಪನ್ನಗಳ ಬಳಕೆ ಹೆಚ್ಚಾಗಲಿದ್ದು, ಬ್ಯಾಂಕುಗಳ ಸಾಲ ನೀಡುವಿಕೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ದೇಶದ ಆರ್ಥಿಕತೆಯ ಬೆಳವಣಿಗೆಯೂ ಆಗಲಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ದೇಶದಲ್ಲಿ ಕೆಲ ದಿನಗಳಿಂದ ಉಂಟಾಗಿದ್ದ ಆರ್ಥಿಕ ಹಿಂಜರಿತ ಈಗ ನಿಧಾನವಾಗಿ ಮಾಯವಾಗುತ್ತಿದೆ. ಸೆಪ್ಟಂಬರ್‌-ಅಕ್ಟೋಬರ್‌ನಲ್ಲಿ ಹಲವಾರು ಹಬ್ಬಗಳು ಇರುವುದರಿಂದ ದೇಶದ ಜನತೆ ಹಬ್ಬದ ಖರೀದಿಯಲ್ಲಿ ತೊಡಗಿದ್ದಾರೆ. ಬಳಕೆಯು ಹೆಚ್ಚಾಗಿ ಆರ್ಥಿಕತೆ ಮೇಲೆರಲು ಸಹಾಯವಾಗುತ್ತದೆ’ ಎಂದು ಅವರು ವಿವರಿಸಿದರು.

“ಕಾರು ಮಾರಾಟ ಕುಸಿತ ಕೇವಲ ತಾತ್ಕಾಲಿಕವಾಗಿದ್ದು, ಮುಂದಿನ ಒಂದೆರಡು ತ್ತೈ ಮಾಸಿಕಗಳ ಅವಧಿಯಲ್ಲಿ ಕಾರು ಮಾರಾಟ ವಹಿವಾಟು ಏರಿಕೆಯಾಗಲಿದೆ ಎಂದು ಖಾಸಗಿ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಹೇಳಿದ್ದಾರೆ’ ಎಂದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English