ತೆಕ್ಕಟ್ಟೆ : ಕುಂಭಾಶಿಯಲ್ಲಿ ಅಪಘಾತಕ್ಕೀಡಾದ ಮಹಿಳೆಯನ್ನು ಸ್ವತ ಆರೋಗ್ಯ ಸಚಿವ ಶ್ರೀರಾಮುಲು ಅವರು ತನ್ನ ವಾಹನದಲ್ಲಿ ಕರೆದುಕೊಂಡು ಆಸ್ಪತ್ರೆ ಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಕುಂಭಾಶಿ ರಸ್ತೆಯಲ್ಲಿ ಬೈಕ್ ಸವಾರರೋರ್ವರು ಲಾರಿ ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದರು. ಇದೇ ಸಮಯದಲ್ಲಿ ಹಿಂದಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ಪಲ್ಟಿಯಾಯಿತು.
ಕುಂದಾಪುರ ಕಡೆಗೆ ಕಾರ್ಯಕ್ರಮಕ್ಕೆಂದು ಆಗಮಿಸುತ್ತಿದ್ದ ಅರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಮಹಿಳೆಯನ್ನು ಕಂಡು ತಮ್ಮ ಕಾರಿನಲ್ಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಸಚಿವರ ಈ ನಡೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.
ಸಚಿವರು ಉಡುಪಿಯಿಂದ ಕುಂದಾಪುರ ಕಡೆಗೆ ಪ್ರಯಾಣ ಮಾಡುತ್ತಿದ್ದರು.
Click this button or press Ctrl+G to toggle between Kannada and English