ನವದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
ಇಂದಿನಿಂದ ವಿಚಾರಣೆ ಆರಂಭವಾಗಲಿದ್ದು, ನ್ಯಾ.ಎನ್ ವಿ ರಮಣ ನೇತೃತ್ವದ ಪಂಚಸದಸ್ಯ ಪೀಠ ವಿಚಾರಣೆ ನಡೆಸಲಿದೆ.
ಕಳೆದ ಆಗಸ್ಟ್ 05 ರಂದು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದಿವೆ. ಇದರ ವಿಚಾರಣೆಗೆಂದೇ ಇತ್ತೀಚೆಗೆ ಪಂಚ ಸದಸ್ಯ ಪೀಠವನ್ನು ರಚಿಸಲಾಗಿದೆ.
ಒಂದು ದೇಶ, ಒಂದೇ ಸಂವಿಧಾನ ಎಂಬ ಪರಿಕಲ್ಪನೆಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯಲಾಗಿತ್ತು. ಜೊತೆಗೆ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಲಾಗಿತ್ತು.
Click this button or press Ctrl+G to toggle between Kannada and English