ಬಿಬಿಎಂಪಿ ಮೇಯರ್ ಆಯ್ಕೆ : ಕನ್ನಡಪರ ಸಂಘಟನೆಗಳು ಬಿಜೆಪಿ ವಿರುದ್ಧ ಆಕ್ರೋಶ

4:18 PM, Tuesday, October 1st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kannada-flagಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿಯ ಎಂ. ಗೌತಮ್ ಕುಮಾರ್ ಜೈನ್ ಆಯ್ಕೆಯಾದರು. ನೂತನ ಮೇಯರ್ ಆಯ್ಕೆ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಮಂಗಳವಾರ ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ ನಡೆಯಿತು. ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜೋಗುಪಾಳ್ಯದ ಕಾರ್ಪೊರೇಟರ್ ಗೌತಮ್ ಕುಮಾರ್ ಜೈನ್ ಮೇಯರ್ ಆಗಿ ಆಯ್ಕೆಯಾದರು.

ಕನ್ನಡಿಗರನ್ನು ಮೇಯರ್ ಆಗಿ ಆಯ್ಕೆ ಮಾಡಲು ಬಿಜೆಪಿ ವಿಫಲವಾಗಿದೆ. ಬೆಂಗಳೂರಿನ ಆಡಳಿತ ಮಾರ್ವಾಡಿಗಳ ಕೈಗೆ ಸಿಕ್ಕಿದೆ ಎಂದು ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

4 ವರ್ಷಗಳ ಬಳಿಕ ಬಿಬಿಎಂಪಿಯ ಆಡಳಿತ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಕೈ ತಪ್ಪಿದೆ. 2015ರ ಬಿಬಿಎಂಪಿ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಹಂಚಿಕೊಂಡು ಆಡಳಿತ ಮಾಡುತ್ತಿದ್ದವು.

ಕರ್ನಾಟಕ ರಣಧೀರ ಪಡೆ ಸೇರಿದಂತೆ ವಿವಿಧ ಸಂಘಟನೆಗಳು ನೂತನ ಮೇಯರ್ ಆಯ್ಕೆಗೆ ವಿರೋಧ ವ್ಯಕ್ತವಡಿಸಿವೆ. #WeWantKannadigaMayor ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿ ಟ್ವೀಟ್ ಮಾಡುತ್ತಿವೆ. ಫೇಸ್‌ ಬುಕ್‌ನಲ್ಲಿ ಸರಣಿ ಪೋಸ್ಟ್ ಹಾಕುತ್ತಿವೆ.

ಕನ್ನಡಪರ ಹೋರಾಟಗಾರರನ್ನು ಜೈಲಿಗೆ ಕಳಿಸಿದ ಮಾರ್ವಾಡಿ ಸಮುದಾಯಕ್ಕೆ ಮೇಯರ್ ಪಟ್ಟ ಕೊಟ್ಟ ಬಿಜೆಪಿಯ ಕನ್ನಡ ವಿರೋಧಿ ನಿಲುವು ಖಂಡಿಸಿ ಇಂದು ಸಂಜೆ 6 ಗಂಟೆಯಿಂದ ಟ್ವೀಟರ್ ಅಭಿಯಾನವನ್ನು ಕೈಗೊಳ್ಳಲಾಗಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English