ನೆರೆಪರಿಹಾರದಲ್ಲಿ ನಿರ್ಲಕ್ಷ್ಯ ಆರೋಪ : ವಿಧಾನಸಭಾ ಅಧಿವೇಶನ ಬಹಿಷ್ಕಾರದ ಎಚ್ಚರಿಕೆ; ಐವನ್ ಡಿಸೋಜ

2:59 PM, Wednesday, October 2nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Ivan-disozaಮಂಗಳೂರು : ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ.10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಗುವುದು. ನಾವು ಅಧಿವೇಶನ ಬಹಿಷ್ಕರಿಸಿದರೆ ಅದಕ್ಕೆ ಬಿಜೆಪಿ ಕಾರಣವೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಹಾನಿಯಿಂದ 35 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರವೇ ಹೇಳಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಬಿಹಾರದಲ್ಲಿ ಪ್ರವಾಹವಾದಾಗ ಟ್ವೀಟ್ ಮೂಲಕ ನೆರವಿನ‌ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ನಿರ್ಲಕ್ಷ್ಯಕ್ಕೆ ಕರ್ನಾಟಕದ ಮುಖ್ಯಮಂತ್ರಿ, ಸಂಸದರಿಗೆ ಪ್ರಧಾನಿ ಜೊತೆಗೆ ಮಾತನಾಡಲು ಧೈರ್ಯ ಇಲ್ಲದಿರುವುದೇ ಕಾರಣ. ರಾಜ್ಯದ ಬಗ್ಗೆ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English