ಪಾಟ್ನಾ : ಬಿಹಾರದಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹ ಉಂಟಾಗಿದ್ದು, ಪ್ರವಾಹ ಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಬಜೆಪಿ ಸಂಸದರೊಬ್ಬರ ದೋಣಿ ಮುಳುಗಿದ ಘಟನೆ ಬುಧವಾರ ನಡೆದಿದೆ.
ಪಾಟಲಿಪುತ್ರದ ಬಿಜೆಪಿ ಸಂಸದ ರಾಮ್ ಕೃಪಾಳ್ ಯಾದವ್ ಅವರು ಬಿಹಾರ ರಾಜಧಾನಿ ಪಾಟ್ನಾ ಬಳಿಯ ಮಸೌರ್ಹಿ ಎಂಬಲ್ಲಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಅವರಿದ್ದ ದೋಣಿ ಮುಳುಗಿತ್ತು. ಕೂಡಲೇ ಸ್ಥಳೀಯರು ಅವರನ್ನು ರಕ್ಷಿಸಿದ ಪರಿಣಾಮ ಅವರು ಪ್ರಾಣಾಪಾಯದಿಂದ ಪಾರಾದರು.
ನಂತರ ಮಾತನಾಡಿದ ಯಾದವ್, ‘ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಪಾಟ್ನಾ ಮಾತ್ರವಲ್ಲದೆ ಸುತ್ತಲ ಹಲವು ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದೆ. ಜೊತೆಗೆ ನೆರೆ ಪರಿಶೀಲನೆಗೆ ಹೊರಟರೆ ರಾಜ್ಯ ಸರ್ಕಾರ ದೋಣಿಯನ್ನೂ ನೀಡಿಲಿಲ್ಲ’ ಎಂದು ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಬಿಹಾರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೀಕರ ಪ್ರವಾಹಕ್ಕೆ ತುತ್ತಾಗಿದ್ದು, ಇದುವರೆಗೆ 30 ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ.
Click this button or press Ctrl+G to toggle between Kannada and English