ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಭರವಸೆ ನೀಡಿದ ನಳಿನ್ ಕುಮಾರ್ ಕಟೀಲ್

1:16 PM, Thursday, October 3rd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

nalin-kumarಬೆಂಗಳೂರು : ಉಪ ಚುನಾವಣೆ ಟಿಕೆಟ್ ನೀಡುವ ಕುರಿತು ಅಮಿತ್ ಶಾ, ಯಡಿಯೂರಪ್ಪ ಮತ್ತು ನಾನು ಕುಳಿತು ಚರ್ಚೆ ನಡೆಸುತ್ತೇವೆ ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಏನೇ ಬಂದರೂ ಅನರ್ಹ ಶಾಸಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಕಟೀಲ್ ಧೈರ್ಯ ಹೇಳಿದ್ದಾರೆ.

ಕಳೆದ ಎಂಟು ದಿನಗಳಿಂದ ಮುಖ್ಯಮಂತ್ರಿ ಹಾಗೂ ನಾನು ಪ್ರವಾಸದಲ್ಲಿದ್ದೆವು, ಹಾಗಾಗಿ ಪರಸ್ಪರ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ, ಇವತ್ತು ಭೇಟಿಗೆ ಅವಕಾಶ ಸಿಕ್ಕಿದೆ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ, ನೆರೆ ಪರಿಹಾರ ವೇಗಗೊಳಿಸಲು ಚರ್ಚೆ ನಡೆಸಿದ್ದೇವೆ ಎಂದರು.

ಮುಂದಿನ ಪಕ್ಷ ಸಂಘಟನೆ, ಉಪ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ, ನನಗೆ ಯಡಿಯೂರಪ್ಪ ಮಾರ್ಗದರ್ಶಕರು, ಪದಾಧಿಕಾರಿಗಳ ಬದಲಾವಣೆ ವಿಚಾರದಲ್ಲಿ ನನ್ನ ಮತ್ತು ಯಡಿಯೂರಪ್ಪ ಮಧ್ಯೆ ಗೊಂದಲವಿಲ್ಲ. ಪ್ರಧಾನ ಕಾರ್ಯದರ್ಶಿ ಆಗಿ ಸಿಟಿ ರವಿ ಇದ್ದರು, ನಮ್ಮ ಪಕ್ಷದ ನಿಯಮ ಒಬ್ಬರಿಗೆ ಒಂದೇ ಹುದ್ದೆ ಎನ್ನೋದು, ಹಾಗಾಗಿ ಸಿಟಿ ರವಿ ಸಚಿವರಾದ ಬಳಿಕ ಅವರ ಜಾಗಕ್ಕೆ ಕಾರ್ಯದರ್ಶಿಯಾಗಿ ಮಹೇಶ್ ಅವರನ್ನು ನೇಮಿಸಲಾಗಿತ್ತು ಎಂದು ಸ್ಪಷ್ಟಪಡಿಸಿದರು.

ಸುಪ್ರೀಂಕೋರ್ಟ್ ತೀರ್ಪು ಏನೇ ಬರಲಿ, ಅನರ್ಹ ಶಾಸಕರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಅಮಿತ್ ಷಾ, ಯಡಿಯೂರಪ್ಪ ಜೊತೆ ಸೇರಿ ಚರ್ಚೆ ನಡೆಸಿ ಉಪ ಚುನಾವಣೆ ಟಿಕೆಟ್ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.

ನಳಿನ್ ಕುಮಾರ್ ಕಟೀಲ್ ಹಾಗೂ ನನ್ನ ನಡುವೆ ಗುಲಗಂಜಿಯಷ್ಟೂ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಪರಸ್ಪರ ಸಮಾಲೋಚನೆ ಮಾಡಿ ತೀರ್ಮಾನ ಮಾಡುತ್ತಿದ್ದೇವೆ. ಕೆಲವರು ಎಲ್ಲವೂ ಅರಿ ಇಲ್ಲ ಎಂದು ವರದಿ ಮಾಡುತ್ತಿದ್ದಾರೆ ಅದು ಸತ್ಯ ಅಲ್ಲ. ನಾವು ಸರಿ ಇದ್ದೇವೆ ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಇಬ್ಬರು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English