ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ನಿವಾಸಗಳ ಮೇಲೆ ಎಸಿಬಿ ದಾಳಿ

1:50 PM, Thursday, October 3rd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

s-Moorthyಬೆಂಗಳೂರು : ದಂದು ವೆಚ್ಚ ಆರೋಪ ಹಾಗೂ ಸರ್ಕಾರದ ಮಹತ್ವದ ಸೀಲ್(ಮುದ್ರೆ)ಗಳ ದುರುಪಯೋಗದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ನಿವಾಸಗಳ ಮೇಲೆ ಗುರುವಾರ ಎಸಿಬಿ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಎಸ್.ಮೂರ್ತಿ ಸೀಲ್ ಗಳ ದುರುಪಯೋಗಪಡಿಸಿಕೊಂಡಿರುವ ಆರೋಪ ಬಂದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು.

ಗುರುವಾರ ಬೆಳಗ್ಗೆ ಸದಾಶಿವನಗರ, ಆರ್ ಟಿ ನಗರದ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಕೊಡಗು ಬಳಿಯ ಕಾಫಿ ತೋಟದ ಮನೆಯಲ್ಲೂ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English