ದ.ಕ ಜೆಡಿಎಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಕುಂಞಿ ರಾಜೀನಾಮೆ

2:21 PM, Tuesday, October 8th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

mohhamadಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಕಳೆದ ನಾಲ್ಕು ವರ್ಷದಿಂದ ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ, ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಾಗಿದೆ. ಅನಾರೋಗ್ಯದ ಕಾರಣ ಮತ್ತು ವೈಯಕ್ತಿಕ ಕಾರಣಗಳಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು.

ಇನ್ನು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸಮಾವೇಶ ನಡೆಸಿ ಮುಖಂಡರುಗಳ ಅಭಿಪ್ರಾಯ ಪಡೆದು ಹೊಸ ಜಿಲ್ಲಾಧ್ಯಕ್ಷರ ನೇಮಕವಾಗಲಿದೆ ಎಂದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English