ಬೆಳ್ತಂಗಡಿ : ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ದುಷ್ಕರ್ಮಿಗಳು ಕಲ್ಲು ಹೊಡೆದು ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು , ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.
ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ಸವಾರನೋರ್ವ ಬಸ್ಸಿನ ಮುಂಭಾಗದ ಗಾಜಿಗೆ ಕಲ್ಲು ಹೊಡೆದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಮಾರು 15ಸಾವಿರ ರೂ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









