ರಹೀಂ ಉಚ್ಚಿಲ್ ರವರು ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕ

4:34 PM, Thursday, October 10th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Raheemಬೆಂಗಳೂರು : ರಾಜ್ಯ ಸರ್ಕಾರ ವಿವಿದ ಕ್ಷೇತ್ರಗಳಲ್ಲಿ ಸಾಧನೆಗೈದ ಸಾದಕರಿಗೆ ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ನೀಡುವ ಪ್ರಶಸ್ತಿಯ ಕುರಿತು ರಚಿಸಿರುವ ಸಲಹ ಸಮಿತಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಕರ್ನಾಟಕ ಸರಕಾರ ನೇಮಕ ಮಾಡಿದೆ.

ರಾಜ್ಯದ ವಿವಿಧ ಕ್ಷೇತ್ರದ ಹದಿನೇಳು ಮಂದಿ ಗಣ್ಯರನ್ನೊಳಗೊಂಡ ಸಮಿತಿ ಇದಾಗಿದ್ದು ದಿನಾಂಕ 12 ರಂದು ಕನ್ನಡ ಸಂಸ್ಕೃತ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಪ್ರಥಮ ಸಭೆ ಬೆಂಗಳೂರಿನ ಕುಮಾರಕೃಪದಲ್ಲಿ ಜರಗಲಿದೆ.

ಬ್ಯಾರಿ ಭಾಷೆಯ ಪ್ರಥಮ ಚಲನ ಚಿತ್ರ ‘ಮಾಮಿ ಮರ್ಮೋಲ್’ ಇದರ ಕಥೆ, ಸಾಹಿತ್ಯ ಸಂಭಾಷಣೆ ಹಾಗೂ ನಿರ್ದೇಶನ ಮಾಡಿ ನಟಿಸಿರುವ ರಹೀಂ ಉಚ್ಚಿಲ್ ಹಲವಾರು ಬ್ಯಾರಿ ನಾಟಕವನ್ನು ರಚಿಸಿ ನಿರ್ದೇಶಿಸಿದ್ದಾರೆ. ಸುಮಾರು ಹತ್ತು ವರ್ಷಗಳ ಕಾಲ ದೃಶ್ಯ ಹಾಗೂ ಪತ್ರಿಕಾ ಮಾಧ್ಯಮದಲ್ಲೂ ಸೇವೆ ಸಲ್ಲಿಸಿದ್ದು, ಪ್ರಸಕ್ತ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತ ಮೋರ್ಚದ ರಾಜ್ಯ ಉಪಾಧ್ಯಕ್ಷರಾಗಿ ಎರಡನೇ ಅವದಿಗೆ ಸೇವೆ ಸಲ್ಲಿಸುತ್ತಿದ್ದಾರೆ.

ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಸ್ಥಾಪಕ ಕಾರ್ಯದರ್ಶಿಯಾಗಿ, ಬ್ಯಾರಿ ಸಾಹಿತ್ಯ ಸಮ್ಮೇಳನದ ಕಾರ್ಯದರ್ಶಿಯಾಗಿ, ಜಿಲ್ಲಾ ಸಲಹ ಸಮಿತಿ ಸೇರಿದಂತೆ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಘಟನೆಗಳಲ್ಲಿ ಪದಾದಿಕಾರಿಯಾಗಿಯೂ ರಹೀಂ ಉಚ್ಚಿಲ್ ಸೇವೆ ಸಲ್ಲಿಸಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English