- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶಾಸಕ ವಿ. ಸುನಿಲ್‌ ಕುಮಾರ್‌ ಅವರು ವಿಧಾನಸಭೆ ಮುಖ್ಯ ಸಚೇತಕರಾಗಿ ನೇಮಕ

sunil-kumar [1]ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್‌ ಕುಮಾರ್‌ ಅವರು ವಿಧಾನ ಸಭೆಯ ಮುಖ್ಯ ಸಚೇತಕರಾಗಿ ನೇಮಕಗೊಂಡಿದ್ದಾರೆ.

ಮೂರನೇ ಬಾರಿಗೆ ಶಾಸಕರಾಗಿರುವ ಅವರು ಈ ಹಿಂದೆ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿದ್ದರು. 2002ರಲ್ಲಿ ಬಜರಂಗ ದಳ ರಾಜ್ಯ ಸಂಚಾಲಕರಾಗಿ, ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.