ಮಂಗಳೂರು : ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ ನಡೆಸಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ.ಎಸ್. ಹರ್ಷ ಉದ್ಘಾಟಿಸಿದರು.
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗದೊಂದಿಗೆ ಈ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಕಮೀಷನರ್ ಡಾ.ಪಿ.ಎಸ್ .ಹರ್ಷ, ಮಂಗಳೂರು ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ಮೈಬೀಟ್ ಮೈ ಪ್ರೈಡ್ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಅದೇ ರೀತಿ ಮಹಿಳೆಯರು, ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿ ಅವರ ನೆರವಿಗೆ ಮತ್ತು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಪಿಂಕ್ ವಾಟ್ಸಪ್ ಗ್ರೂಪ್ನ್ನು ರಚಿಸಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮಾದಕ ದ್ರವ್ಯದ ಚಟಕ್ಕೆ ಬಲಿಯಾಗದಿರಬೇಕಾದರೆ ತಮ್ಮ ಚಟುವಟಿಕೆಗಳನ್ನು ಮನಸ್ಸಿಗೆ ಮುದನೀಡುವ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಬೇಕು .ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿದೆ. ಈ ಬಗ್ಗೆ ಎಚ್ಚರದಿಂದಿರಬೇಕು. ಅಪರಿಚಿರು ನಮ್ಮ ಮಾಹಿತಿಗಳನ್ನು ಪಡೆದುಕೊಂಡು ನಮಗೆ ವಂಚಿಸುವ ಸಾಧ್ಯತೆಗಳ ಬಗ್ಗೆ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದರು.
ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಸೆಂಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ದೇವಾನಂದ ಪೈ, ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Click this button or press Ctrl+G to toggle between Kannada and English