- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಇಂದು ದೆಹಲಿ ಹೈಕೋರ್ಟ್ ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ

DKShi [1]ನವ ದೆಹಲಿ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ.

ಸೋಮವಾರ ಬೆಳಿಗ್ಗೆ ದೆಹಲಿ ಉಚ್ಛ ನ್ಯಾಯಾಲಯದ ಎದುರು ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಮಾಜಿ ಸಚಿವರ ಪರ ಮೂರು ಹಿರಿಯ ವಕೀಲರು ವಾದ ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಒಂದು ವೇಳೆ ಇಂದು ಹೈಕೋರ್ಟ್ ನಲ್ಲಿ ಜಾಮೀನು ದೊರಕದೆ ಇದ್ದಲ್ಲಿ, ಡಿ ಕೆ ಶಿವಕುಮಾರ್ ಅವರು ನಾಳೆ ( ಮಂಗಳವಾರ) ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಂದೆ ಹಾಜರಾಗಬೇಕಾಗಿದೆ. ಅಲ್ಲಿ ಮೂರನೇ ಅವಧಿಗೆ ನ್ಯಾಯಾಂಗ ಬಂಧನ ವಿಸ್ತರಿಸುವ ಸಾಧ್ಯತೆ ಇದೆ.