- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಡಿ.ಕೆ.ಶಿವಕುಮಾರ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

DKShivkumar [1]ನವ ದೆಹಲಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದ್ದು ಅಲ್ಲಿಯವರೆಗೆ ಅವರು ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ.

ವಕೀಲ ಅಭಿಷೇಕ್ ಮನುಸಿಂಘ್ವಿ ಕೋರ್ಟ್ಗೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮಧ್ಯಾಹ್ನ 3.30 ಕ್ಕೆ ಮುಂದೂಡಲಾಯಿತು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಇದ್ದಾರೆ. ಇಡಿ ವಿಶೇಷ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈಗ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.