ಹುಟ್ಟೂರಿನಲ್ಲಿ ಕದ್ರಿ ಗೋಪಾಲನಾಥ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ

5:07 PM, Monday, October 14th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

gopalnathಮಂಗಳೂರು : ವಿಶ್ವ ಪ್ರಸಿದ್ದ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ಇಂದು ಸಂಜೆ ಅವರ ಹುಟ್ಟೂರು ಬಂಟ್ವಾಳದ ಸಜಿಪದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ 10.15ರಿಂದ 1.45ರವರೆಗೆ ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನ ನಡೆಯಿತು. ಕಲಾವಿದರು, ಜನಪ್ರತಿನಿಧಿಗಳು, ಚೆನ್ನೈ ನಿಂದ ಬಂದಿದ್ದ ಶಿಷ್ಯರು ಅಗಲಿದ ಮಹಾನ್ ಕಲಾವಿದನ ಅಂತಿಮ ದರ್ಶನ ಮಾಡಿದರು.

ಸಂಜೆ ನಾಲ್ಕು ಗಂಟೆಗೆ ಬಂಟ್ವಾಳ ತಾಲೂಕಿನ ಸಜಿಪ ಮಿತ್ತಮಜಲಿನಲ್ಲಿ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ವಿಧಿವಿಧಾನವನ್ನು ಜೋಗಿ ಸಮುದಾಯದ ಸಂಪ್ರದಾಯದಂತೆಯೇ ನಡೆಸಲಾಗುವುದು.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English