ಕಾಸರಗೋಡು : ಅಡ್ಕತ್ತಬೈಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

10:25 AM, Wednesday, October 16th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

kasaragodಕಾಸರಗೋಡು : ರಾಷ್ಟೀಯ ಹೆದ್ದಾರಿಯ ಅಡ್ಕತ್ತಬೈಲ್ ನಲ್ಲಿ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಅ. 16 ರ ಬುಧವಾರ ಮುಂಜಾನೆ ನಡೆದಿದೆ.

ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪರಿಸರವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಅಡ್ಕತ್ತಬೈಲ್ ಶಾಲೆಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಅಪಘಾತದ ಹಿನ್ನಲೆಯಲ್ಲಿ ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಬದಲಿ ರಸ್ತೆಯಾಗಿ ಸಂಚಾರಿಸುತ್ತಿವೆ. ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English