- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕಾಸರಗೋಡು : ಅಡ್ಕತ್ತಬೈಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

kasaragod [1]ಕಾಸರಗೋಡು : ರಾಷ್ಟೀಯ ಹೆದ್ದಾರಿಯ ಅಡ್ಕತ್ತಬೈಲ್ ನಲ್ಲಿ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಅ. 16 ರ ಬುಧವಾರ ಮುಂಜಾನೆ ನಡೆದಿದೆ.

ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪರಿಸರವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಅಡ್ಕತ್ತಬೈಲ್ ಶಾಲೆಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಅಪಘಾತದ ಹಿನ್ನಲೆಯಲ್ಲಿ ಕಾಸರಗೋಡು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಬದಲಿ ರಸ್ತೆಯಾಗಿ ಸಂಚಾರಿಸುತ್ತಿವೆ. ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ.