ಮಂಗಳೂರು : ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕರ ಹುದ್ದೆಗಳಿಗೆ ಪರ್ಯಾಯವಾಗಿ ಹೊಸ ಶಿಕ್ಷಕರ ನೇಮಕಾತಿ ಮಾಡದಿರುವುದನ್ನು ಖಂಡಿಸಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ ಘಟನೆ ತಣ್ಣಿರುಬಾವಿ ಸಮೀಪದ ಕಸ್ಬಾ ಬೆಂಗ್ರೆ ಸರಕಾರಿ ಶಾಲೆಯಲ್ಲಿ ನಡೆದಿದೆ.
500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಕಸ್ಬಾ ಬೆಂಗ್ರೆಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 5 ಮಂದಿ ಖಾಯಂ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆಗೊಳಿಸಲಾಗಿದೆ. ಆದರೇ ಹೊಸ ಶಿಕ್ಷಕರ ನೇಮಕಾತಿ ನಡೆದಿರಲಿಲ್ಲ. ಶಿಕ್ಷಣ ಇಲಾಖೆಯ ಈ ನೀತಿಯನ್ನು ಖಂಡಿಸಿ ಮತ್ತು 5 ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಪಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.
ಪೋಷಕರು ಕೂಡ ವಿದ್ಯಾರ್ಥಿಗಳ ಜೊತೆಗೂಡಿದ್ದು , ಶಿಕ್ಷಣಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೆ ಹೋರಾಟ ಮುಂದುವರಿಸಲು ತೀರ್ಮಾನಿಸಲಾಗಿದೆ.
Click this button or press Ctrl+G to toggle between Kannada and English