- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Sathya-murty [1]ಮಂಗಳೂರು : ದ.ಕ ಜಿಲ್ಲಾಡಳಿತ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದೊಂದಿಗೆ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು.

ನ್ಯಾಯಾಧೀಶ ಕಡ್ಲೂರು ಸತ್ಯ ನಾರಾಯಣಾಚಾರ್ಯ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಾಮಾಜಿಕ ಆರ್ಥಿಕ ಕಾರಣಗಳು, ಕೆಟ್ಟ ವ್ಯಸನಗಳು ನಮ್ಮ ಮಾನಸಿಕ ಆರೋಗ್ಯದ ಮೇಲೆ ಗರಿಷ್ಠ ಪ್ರಭಾವ ಬೀರುತ್ತದೆ ಎಂದು  ಅವರು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಯುವ ಜನರನ್ನು ಸರಿದಾರಿ ಯಲ್ಲಿ ಸಾಗುವಂತೆ ಮಾಡುವಲ್ಲಿ ಮಹಿಳೆಯ ರ ಪಾತ್ರ ಹಿರಿದು. ಸಮಾಜದ ಒಳಿತಿಗಾಗಿ ಸಾಮೂಹಿಕ ಪ್ರಯತ್ನ ಅಗತ್ಯ. ಸಮಾಜದಲ್ಲಿ ನಮ್ಮ ತಪ್ಪುಕೆಲಸಗಳನ್ನು ತಪ್ಪು ಎಂದು ಹೇಳಿ ತಪ್ಪು ಮಾಡುವವರನ್ನು ಸರಿದಾರಿಗೆ ತರುವವರ ಅಗತ್ಯ ವಿದೆ. ಆಧುನಿಕ ಮೊ ಬೈಲ್ಪ ಸೌಲಭ್ಯಗಳು,ಇನ್ನಿತರ ವ್ಯಸನಗಳು ನಮ್ಮ ಮಾನಸಿಕ ಆರೋಗ್ಯ ಮತ್ತು ನಮ್ಮ ಕುಟುಂಬದ ಆರೋಗ್ಯಕ್ಕೆ ಹಾನಿಯಾಗದಂತೆ ಎಚ್ಚರ ವಹಿಸಬೇಕಾಗಿದೆ ಎಂದು ನ್ಯಾ.ಕಡ್ಲೂ ರು ಸತ್ಯನಾರಾಯಣ ಆಚಾರ್ಯ ತಿಳಿಸಿದ್ದಾರೆ.

ಸಮಾರಂಭದಲ್ಲಿ ಅತಿಥಿ ಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎ.ಜಿ.ಗಂಗಾಧರ, ಮಂಗಳೂ ರು ವಕೀಲರ ಸಂಘದ ಅಧ್ಯಕ್ಷ ನರಸಿಂಹ ಹೆಗ್ಡೆ, ಮಹಾವಿದ್ಯಾಲಯದ ಪ್ರಾಂಶುಪಾಲ ಶಾರದಮ್ಮ , ಸಿಪ್ರಿಯಾನ್ ಮೊಂತೆರೊ, ಜಿಲ್ಲಾ ವೈದ್ಯಾಧಿಕಾರಿ ಡಾ.ರಾಜೇಶ್ವರಿ ದೇವಿ, ಮಾನಸಿಕ ತಜ್ಞ ಡಾ.ಅನಿರುದ್ದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಡಾ.ರತ್ನಾಕರ ಸ್ವಾಗತಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.