ಹೈದರಾಬಾದ್ : ವಿವಾದಿತ ಸ್ವಯಂಘೋಷಿತ ದೇವಮಾನವ ಕಲ್ಕಿ ಭಗವಾನ್ಗೆ ಸೇರಿದ ವಿವಿಧ ಪ್ರದೇಶಗಳಲ್ಲಿ ಬುಧವಾರ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 500 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಗಳನ್ನು ಪತ್ತೆ ಮಾಡಿದ್ದಾರೆ.
ಕಲ್ಕಿ ಭಗವಾನ್ಗೆ ಸೇರಿದ ಚಿತ್ತೂರಿನ ಆಶ್ರಮ, ಆಂಧ್ರ ಮತ್ತು ಕರ್ನಾಟಕದ ವಿವಿಧೆಡೆ ಹಾಗೂ ಕಲ್ಕಿ ಭಗವಾನ್ ಪುತ್ರ ತಮಿಳುನಾಡಿನಲ್ಲಿ ಹೊಂದಿದ್ದ ವಹಿವಾಟಿನ ಸ್ಥಳಗಳು ಸೇರಿ 40 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು.
ಈ ವೇಳೆ ಸುಮಾರು 409 ಕೋಟಿ ರೂ. ಅಘೋಷಿತ ಆಸ್ತಿ ಪತ್ತೆಯಾಗಿದೆ. ಜತೆಗೆ 43.90 ಕೋಟಿ ರೂ. ನಗದು, 18 ಕೋಟಿ ರೂ. ಮೌಲ್ಯದ ಅಮೆರಿಕನ್ ಡಾಲರ್, ಬಂಗಾರ ಹಾಗೂ ವಜ್ರಗಳನ್ನು ಒಳಗೊಂಡಂತೆ ಒಟ್ಟು 93 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು, ಹೈದರಾಬಾದ್, ಚೆನ್ನೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಕಲ್ಕಿ ಭಗವಾನ್ಗೆ ಸೇರಿದ ಪ್ರದೇಶಗಳಲ್ಲಿ ಅಧಿಕಾರಿಗಳು ಈಗಲೂ ಶೊಧ ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ.
Click this button or press Ctrl+G to toggle between Kannada and English