ಚಂದನ್ ಶೆಟ್ಟಿ- ನಿವೇದಿತಾ ಗೌಡ ಅದ್ಧೂರಿ ನಿಶ್ಚಿತಾರ್ಥ

5:05 PM, Monday, October 21st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

chandan-shettyಮೈಸೂರು : ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ಗರ್ಲ್ ನಿವೇದಿತಾ ಗೌಡ ನಿಶ್ವಿತಾರ್ಥ ಇಂದು ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಡೆದಿದೆ.

ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಎಂದು ಹೇಳಿಕೊಂಡು ಬರುತ್ತಿದ್ದರು. ಈ ಮಧ್ಯೆ ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡಿದ್ದವು. ಆದರೆ ಚಂದನ್ ನಿವೇದಿತಾ ಎಲ್ಲಿಯೂ ತಮ್ಮ ಸಂಬಂಧದ ಬಗ್ಗೆ ಸ್ಪಷ್ಟವಾಗಿ ಹೇಳಿಕೊಂಡಿರಲಿಲ್ಲ.

ಯುವ ದಸರಾದಲ್ಲಿ ಚಂದನ್ ರಿಂಗ್ ತೊಡಿಸುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಈ ರೀತಿ ಪ್ರೇಮ ನಿವೇದನೆ ಸಲ್ಲಿಸಿದ್ದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆದಿದ್ದವು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English