ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

11:04 AM, Tuesday, October 22nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Red-Alertಮಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 4 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಅ.26ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯಲಿದೆ. ಅ.23ರಂದು ಬೆಳಗ್ಗೆ 8:30ರಿಂದ ಆರಂಭಗೊಳ್ಳುವ ರೆಡ್ ಅಲರ್ಟ್ ಅ.26ರಂದು ಬೆಳಗ್ಗೆ 8:30ರವೆಗೂ ಮುಂದುವರಿಯಲಿದೆ. ಈ ಸಂದರ್ಭ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English