ಉಡುಪಿ : ಬ್ಯಾಂಕ್‌ಗಳ ವಿಲೀನ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ; ಬ್ಯಾಂಕ್ ನೌಕರರಿಂದ ಮುಷ್ಕರ

1:14 PM, Tuesday, October 22nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Udupi-bank-mushkaraಉಡುಪಿ : ಬ್ಯಾಂಕ್‌ಗಳ ವಿಲೀನೀಕರಣಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಮತ್ತು ಬ್ಯಾಂಕ್ ಎಂಪ್ಲಾಯಿಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕಗಳ ನೇತೃತ್ವದಲ್ಲಿ ಮಂಗಳವಾರ ಕಾರ್ಪೊರೇಶನ್ ಬ್ಯಾಂಕ್ ಉಡುಪಿ ವಲಯ ಕಚೇರಿ ಎದುರು ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಬ್ಯಾಂಕ್‌ಗಳನ್ನು ವಿಲೀನ ಮಾಡುವ ಮೂಲಕ ಬ್ಯಾಂಕ್‌ಗಳನ್ನು ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂದು ಉಡುಪಿ ಕಾರ್ಪೊರೇಶನ್ ಬ್ಯಾಂಕ್ ನೌಕರರ ಸಂಘದ ಉಪಾಧ್ಯಕ್ಷ ರಘುರಾಮಕೃಷ್ಣ ಬಲ್ಲಾಳ್ ಆರೋಪಿಸಿದ್ದಾರೆ.

ಬ್ಯಾಂಕ್ ವಿಲೀನದಿಂದ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ಸ್ಟೇಟ್ ಬ್ಯಾಂಕ್‌ಗಳ ವಿಲೀನದಿಂದ ಈಗಾಗಲೇ 6,950 ಶಾಖೆಗಳು ಮುಚ್ಚಲ್ಪಟ್ಟಿವೆ. ನಿರುದ್ಯೋಗ ಸಮಸ್ಯೆ ದೊಡ್ಡ ಮಟ್ಟದಲ್ಲಿ ಇರುವ ಇಂತಹ ಸಂದರ್ಭದಲ್ಲಿ ವಿಲೀನದಿಂದ 50 ಸಾವಿರ ಬ್ಯಾಂಕ್ ಉದ್ಯೋಗಗಳು ನಷ್ಟವಾಗಿವೆ. ಬ್ಯಾಂಕ್ ಗಳಲ್ಲಿ ಸಾರ್ವಜನಿಕರಿಗೆ ಶುಲ್ಕ ಜಾಸ್ತಿ ಮಾಡಲಾಗಿದೆಂದು ಅವರು ದೂರಿದರು.

ಸಿಂಡಿಕೇಟ್ ಬ್ಯಾಂಕ್ ನೌಕರರ ಸಂಘದ ರಾಜ್ಯ ಜೊತೆ ಕಾರ್ಯದರ್ಶಿ ಪ್ರೇಮನಾಥ ಪೂಜಾರಿ ಮಾತನಾಡಿ, ಈಗಾಗಲೇ ವಿಲೀನ ಆಗಿರುವ ಬ್ಯಾಂಕ್ ಗಳ ಸಿಬ್ಬಂದಿ ಶೋಚನೀಯ ಪರಿಸ್ಥಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಹಕರು ಕೂಡ ತಮ್ಮ ಸೇವೆಯನ್ನು ಪಡೆದುಕೊಳ್ಳಲು ಪರದಾಡುತ್ತಿದ್ದಾರೆ. ಈ ಸಮಸ್ಯೆಗಳನ್ನು ಕೇಂದ್ರ ಸರಕಾರ ತಿಳಿದು ತಿಳಿಯದಂತೆ ಮಾಡುತ್ತಿದೆ.

ಕರ್ಣಾಟಕ ಬ್ಯಾಂಕಿನ ನಿತ್ಯಾನಂದ, ಫೆಡರೇಶನ್‌ನ ರವೀಂದ್ರ, ಜಿಲ್ಲಾ ಸಂಘಟನೆ ಅಧ್ಯಕ್ಷ ರಾಮಮೋಹನ್, ನೌಕರರ ಸಂಘಟನೆಯ ರಮೇಶ್ ಮಾತ ನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹೆರಾಲ್ಡ್ ಡಿಸೋಜ, ವಿವಿಧ ಬ್ಯಾಂಕ್‌ಗಳ ಪರವಾಗಿ ನಾಗೇಶ್ ನಾಯಕ್, ಮನೋಜ್ ಕುಮಾರ್, ಜಯನ್ ಮಲ್ಪೆ, ಗುರುದತ್, ಸೂರಜ್ ಮತ್ತಿತರರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English