ಕರಾವಳಿಯಲ್ಲಿ ಮತ್ತೆ ರೆಡ್‌ ಅಲರ್ಟ್‌ ಘೋಷಣೆ

10:04 AM, Wednesday, October 23rd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Red-Alertಮಂಗಳೂರು : ಕರಾವಳಿ ಭಾಗದಲ್ಲಿ ಮಂಗಳವಾರ ಮಳೆ ತುಸು ಕ್ಷೀಣಿಸಿತ್ತು. ಆದರೆ ಬುಧವಾರ ಮತ್ತು ಗುರುವಾರಕ್ಕೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಅ.23 ಮತ್ತು 24ರಂದು ಕರಾವಳಿ ಯಲ್ಲಿ ಬಿರುಸಿನಿಂದ ಕೂಡಿದ ಮಳೆಯಾಗುವುದು ಸಂಭವನೀಯ. ಗುಡುಗು, ಸಿಡಿಲು ಸಹಿತ ಜೋರಾಗಿ ಗಾಳಿ ಬೀಸಲಿದೆ. ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮುನ್ನೆಚ್ಚರಿಕೆ ದೃಷ್ಟಿಯಿಂದ ಲೈಫ್‌ಗಾರ್ಡ್‌ನವರು ಕಾರ್ಯನಿರ್ವಹಿಸುತ್ತಿದ್ದಾರೆ.

ಮಂಗಳವಾರದಂದು ಉತ್ತಮ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿತ್ತು. ಮಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇತ್ತು. ಸುಬ್ರಹ್ಮಣ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಬಂಟ್ವಾಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ಉತ್ತಮ ಮಳೆಯಾಗಿದೆ. ತೆಕ್ಕಟ್ಟೆ, ಬ್ರಹ್ಮಾವರ, ಸಂತೆಕಟ್ಟೆ, ಉದ್ಯಾವರ ಭಾಗದಲ್ಲಿ ಸಂಜೆಯ ಅನಂತರ ಉತ್ತಮ ಮಳೆ ಸುರಿಯಿತು. ಉಳಿದಂತೆ ಕುಂದಾಪುರ, ಬೈಂದೂರು, ಕಾರ್ಕಳ, ಸಿದ್ಧಾಪುರ ಭಾಗಗಳಲ್ಲಿ ತುಂತುರು ಮಳೆಯಾಯಿತು. ಉಡುಪಿ ನಗರದಲ್ಲಿ ಮಧ್ಯಾಹ್ನದವರೆಗೂ ವಾತಾವರಣ ಬಿಸಿಲಿನಿಂದ ಕೂಡಿತ್ತು. ಮಧ್ಯಾಹ್ನದ ಅನಂತರ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿಯಿತು. ಈ ಸಂದರ್ಭದಲ್ಲಿ ನಗರದಲ್ಲಿ ಟ್ರಾಫಿಕ್‌ ದಟ್ಟನೆಯೂ ಉಂಟಾಯಿತು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English