ಯುವವಾಹಿನಿ ಮಾಣಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

12:16 PM, Wednesday, October 23rd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

yuva-vahiniವಿಟ್ಲ : ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ ಮಾಣಿ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣದ ಕಾರ್ಯಕ್ರಮವನ್ನು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ಉದ್ಘಾಟಿಸಿದರು.

ಯುವವಾಹಿನಿಯು ಕ್ರಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಯುವ ಮನಸ್ಸುಗಳನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಗಳಲ್ಲಿ ಉತ್ತಮ ರೀತಿಯಲ್ಲಿ ತೊಡಗಿಕೊಳ್ಳುವ ಒಂದು ಅದ್ಭುತ ಸಂಘಟನೆ, ಚಂಚಲತೆಯ ಯುವ ಮನಸ್ಸುಗಳನ್ನು ಧನಾತ್ಮಕ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಯುವವಾಹಿನಿಯ ಬದ್ಧತೆ ಅಭಿನಂದನಾರ್ಹ” ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠದ ನಿರ್ದೇಶಕ ಮುದ್ದು ಮೂಡುಬೆಳ್ಳೆ ಹೇಳಿದರು.

ಗೆಜ್ಜೆ ಗಿರಿ ನಂದನ ಬಿತ್ತಿಲ್ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲುರವರು ಮಾಣಿ ಘಟಕದ ಗತವರ್ಷದ ಒಟ್ಟು ಕಾರ್ಯಚಟುವಟಿಕೆಗಳ ನೆನಪಿನ ಸಂಚಿಕೆ ‘ಮಾಣಿಕ್ಯ’ವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಡಾ.ರಾಜಾರಾಮ್ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿದರು. ಚುನಾವಣಾಧಿಕಾರಿ ಅಧಿಕಾರಿ ರಾಜೇಶ್ ಪೂಜಾರಿ ಬಾಬಣಕಟ್ಟೆ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದರು.

ಮುಖ್ಯ ಅತಿಥಿಗಳಾಗಿ ಮಾಣಿ ಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ನಾರಾಯಣ ಸಾಲ್ಯನ್, ಗೌರವಾಧ್ಯಕ್ಷ ಈಶ್ವರ ಪೂಜಾರಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ., ಪುತ್ತೂರು ಉಪವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಲೋಕನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಹರೀಶ್ ಪೂಜಾರಿ 2018-19ಸಾಲಿನ ಪದಾಧಿಕಾರಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಘಟಕದ ಕಾರ್ಯದರ್ಶಿ ಸುಜಿತ್ ಅಂಚನ್ ಗತವರ್ಷದ ವರದಿ ವಾಚಿಸಿದರು. ಉಪಾಧ್ಯಕ್ಷ ಪ್ರಶಾಂತ್ ಅನಂತಾಡಿ ಸ್ವಾಗತಿಸಿದರು. ನಿಯೋಜಿತ ಕಾರ್ಯದರ್ಶಿ ಶಿವರಾಜ್ ಪಿ.ಆರ್. ವಂದಿಸಿದರು. ಘಟಕದ ಸದಸ್ಯರಾದ ದಿನಕರ್ ಬರಿಮಾರು, ದೀಪಕ್ ಪೆರಾಜೆ, ತೃಪ್ತಿ ಮಿತ್ತೂರು ಮತ್ತು ರಾಜೇಶ್ ಬಲ್ಯ ಕಾರ್ಯಕ್ರಮ ನಿರ್ವಹಿಸಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English