- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಸೋನಿಯಾ ಗಾಂಧಿ

sonia-gandhi [1]ನವದೆಹಲಿ : ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಬುಧವಾರ ಬೆಳಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಅಂಬಿಕಾ ಸೋನಿ ಭೇಟಿಯಾಗಿ ಕುಶಲೋಪರಿ ನಡೆಸಿದರು.

ತಿಹಾರ್ ಜೈಲಿಗೆ ಭೇಟಿ ನೀಡಿದ ವೇಳೆ ಸಂಸದ, ಡಿಕೆ ಸಹೋದರ ಡಿಕೆ ಸುರೇಶ್ ಕೂಡಾ ಜತೆಗಿದ್ದರು ಎಂದು ವರದಿ ತಿಳಿಸಿದೆ.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತ ತೀರ್ಪನ್ನು ದೆಹಲಿ ಹೈಕೋರ್ಟ್ ಇಂದು ನೀಡಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟಂಬರ್ ನಲ್ಲಿ ಡಿಕೆಶಿಯನ್ನು ಬಂಧಿಸಿತ್ತು.