ಬೆಳ್ತಂಗಡಿ: ಧರ್ಮಸ್ಥಳ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಶನಿವಾರ ಎಸ್.ಐ.ಟಿ. ತಂಡ ಧರ್ಮಸ್ಥಳ ಮುಖ್ಯದ್ವಾರದ ಸಮೀಪದ ಬಾಹಬಲಿ ಬೆಟ್ಟದ ಕೆಳಭಾಗದ ಅರಣ್ಯದಲ್ಲಿ ಶೋಧ ಕಾರ್ಯಕ್ಕೆ ಮುಂದಾಗಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಎಂಬ ಪ್ರದೇಶದಲ್ಲಿ ಆ.8ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ಅಧಿಕಾರಿಗಳು 16 ಮತ್ತು 16A ಎರಡು ಸ್ಥಳದಲ್ಲಿ ಶೋಧ ನಡೆಸಿತ್ತು. ಜೊತೆಗೆ
ಶನಿವಾರ ಹೊಸ ಸ್ಥಳಕ್ಕೆ ಸಾಕ್ಷಿ ದೂರುದಾರನನ್ನು ಎಸ್ಐಟಿ ಅಧಿಕಾರಿಗಳು ಕರೆತಂದಿದ್ದಾರೆ. ಇಲ್ಲಿ ಸಾಕ್ಷಿ ದೂರುದಾರ ಎಷ್ಟು ಸ್ಥಳಗಳನ್ನು ಗುರುತಿಸುತ್ತಾನೆ ಎಂಬುದು ಕಾದು ನೋಡಬೇಕಿದೆ. 13ನೇ ಸ್ಥಳದ ಮಹಜರು ಪ್ರಕ್ರಿಯೆ ನಡೆಸಿದ ಬಳಿಕ ಆ ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ಕೈಗೊಂಡಿಲ್ಲ. ಇದೀಗ ಹೊಸ ಸ್ಥಳದಲ್ಲಿ ಮಹಜರು ಪ್ರಕ್ರಿಯೆಗೆ ಆಗಮಿಸಿದ್ದಾರೆ.
ಎಸ್.ಐ.ಟಿ ಅಧಿಕಾರಿಗಳು ಜೊತೆಗೆ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ವೈದ್ಯರ ತಂಡ, ಅರಣ್ಯಾಧಿಕಾರಿಗಳು, ಎಫ್.ಎಸ್.ಎಲ್. ತಂಡ, ಐ.ಎಸ್.ಡಿ. ಹಾಗೂ ಇತರ ಅಧಿಕಾರಿಗಳ ಸಹಿತ ಎಲ್ಲ ತಂಡಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿವೆ.
ಅನಾಮಿಕ ಇಂದು ಬೆಳಗ್ಗೆ 10:15 ಗಂಟೆ ಸುಮಾರಿಗೆ ಪೊಲೀಸ್ ಬಂದೋಬಸ್ತ್ ನಲ್ಲಿ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದು, ಅಲ್ಲಿಂದ 12:05ಕ್ಕೆ ಬೆಳ್ತಂಗಡಿಯಿಂದ ಹೊರಟು 12.45 ಸುಮಾರಿಗೆ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿದ್ದಾನೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









