ಮಂಗಳೂರು : ಖಜಾನೆ ಖಾಲಿಯಾದವರಿಂದ ಅಭಿವೃದ್ಧಿ ಕೆಲಸಗಳು ಸಾಧ್ಯವೇ; ಮಾಜಿ ಸಚಿವ ರಮಾನಾಥ ರೈ

2:50 PM, Monday, October 28th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Congressಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು, ಕಾಂಗ್ರೆಸ್ ಆಡಳಿತಲ್ಲಿದ್ದಾಗ ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಾಧ್ಯವಾಗಿದೆ. ಆದರೆ ಬಿಜೆಪಿ ಸರಕಾರದಿಂದ ನೆರೆ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.

ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಮಹಾನಗರ ಪಾಲಿಕೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ನಗರದ ನೀರಿನ ಸಮಸ್ಯೆಯನ್ನು ನಿವಾರಿಸುವಲ್ಲಿ ತುಂಬೆ ಅಣೆಕಟ್ಟು ರಚನೆ, ಒಳಚರಂಡಿ ಕಾಮಗಾರಿ, ನಗರದ ಪ್ರಮುಖ ರಸ್ತೆಗಳ ಕಾಂಕ್ರಿಟೀಕರಣ, ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ, ಸುರತ್ಕಲ್‌ನಲ್ಲಿ ಮಾದರಿ ಮಾರುಕಟ್ಟೆ ನಿರ್ಮಾಣ, ಲೇಡಿಗೇಶನ್ ಹಾಗೂ ವೆನ್ಲಾಕ್ ಆಸ್ಪತ್ರೆ ಮೇಲ್ದರ್ಜೆಗೆ, ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಹಲವಾರು ಯೋಜನೆಗಳು ಕಾಂಗ್ರೆಸ್ ಆಡಳಿತದಲ್ಲಿ ಆಗಿವೆ. ಜನತೆ ಈ ಅಭಿವೃದ್ಧಿ ಕಾರ್ಯಗಳನ್ನು ತುಲನೆ ಮಾಡಿಕೊಂಡು ಮತ್ತೊಮ್ಮೆ ಕಾಂಗ್ರೆಸ್‌ಗೆ ಅವಕಾಶ ನೀಡಬೇಕು. ನಗರದಲ್ಲಿ ಅಭಿವೃದ್ಧಿ ಜತೆಗೆ ಸಾಮಾಜಿಕ ಸಾಮರಸ್ಯವನ್ನು ಗಟ್ಟಿಗೊಳಿಸಲು ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಕರೆ ನೀಡಿದರು.

ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್, ಶಶಿಧರ ಹೆಗ್ಡೆ, ಆರ್.ಕೆ. ಪ್ರಥ್ವಿರಾಜ್, ಸುರೇಂದ್ರ ಕಂಬಳಿ, ವಿಶ್ವಾಸ್ ದಾಸ್, ಅಬ್ದುಲ್ ಸಲೀಂ, ಸಂತೋಷ್ ಶೆಟ್ಟಿ, ಜಯಶೀಲ ಅಡ್ಯಂತಾಯ, ನಝೀರ್ ಬಜಾಲ್ ಉಪಸ್ಥಿತರಿದ್ದರು.

ಮಂಗಳೂರು ಮಹಾನಗರ ಪಾಲಿಕೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಪಟ್ಟಿ ಸಿದ್ಧವಾಗುತ್ತಿದೆ. ಸಾಕಷ್ಟು ಅರ್ಜಿಗಳು ಬಂದಿದ್ದು, ಸಾಮಾಜಿಕ ಸಮತೋಲನದೊಂದಿಗೆ ಎಲ್ಲರಿಗೂ ಆದ್ಯತೆ ನೀಡಲಾಗುವುದು. ಹೊಸಬರಿಗೆ ಅವಕಾಶದ ಜತೆಗೆ ಉತ್ತಮ ಕೆಲಸ ಮಾಡಿದ ಹಿರಿಯರನ್ನು ಪರಿಗಣಿಸಲಾಗುವುದು. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಪಕ್ಷದಲ್ಲಿ ತುಂಬಾ ಚರ್ಚೆ ಏನೂ ಇಲ್ಲ. ಪಟ್ಟಿ ಶೀಘ್ರವೇ ಬಿಡುಗಡೆಯಾಗಲಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English