ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್. ವೆಂಕಟಾಚಲ(90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಗ್ಗೆ ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ದೈವಾಧೀನರಾಗಿದ್ದಾರೆ. ಸದ್ಯ ರಾಮಯ್ಯ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಗೆ ಸದಾಶಿವನಗರದ ಮಹಾಲಕ್ಷ್ಮಿ ದೇವಾಲಯ ರಸ್ತೆಯಲ್ಲಿರುವ ಮನೆಗೆ ತರಲಿದ್ದಾರೆ. ನಾಳೆ ಸಾರ್ವಜನಿಕ ದರ್ಶನಕ್ಕೆ ಇಡುವ ಸಾಧ್ಯತೆ ಇದೆ.
ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು
ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು. ಇವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಆಗಿದ್ದರು.
Click this button or press Ctrl+G to toggle between Kannada and English