ಕರಾಚಿ-ರಾವಲ್ಪಿಂಡಿ ಎಕ್ಸ್ ಪ್ರೆಸ್ ರೈಲು ಬೆಂಕಿಗಾಹುತಿ : 65 ಮಂದಿ ಪ್ರಯಾಣಿಕರು ಮೃತ್ಯು; ಹಲವರಿಗೆ ಗಾಯ

1:11 PM, Thursday, October 31st, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Railuಲಿಯಾಖತ್ಪುರ : ಪಾಕಿಸ್ತಾನದ ಕರಾಚಿಯಿಂದ ಲಾಹೋರ್ಗೆ ಸಂಚರಿಸುತ್ತಿದ್ದ ಕರಾಚಿ-ರಾವಲ್ಪಿಂಡಿ ತೇಜ್ಗಾಮ್ ಎಕ್ಸ್ಪ್ರೆಸ್ ರೈಲು ಬೆಂಕಿ ಅನಾಹುತಕ್ಕೀಡಾಗಿದ್ದು, ಕನಿಷ್ಠ 65 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಲಿಯಾಖತ್ಪುರಕ್ಕೆ ತಲುಪುತ್ತಿರುವ ವೇಳೆ ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದು ಉಳಿದ ಬೋಗಿಗಳಿಗೂ ಆವರಿಸತೊಡಿಗಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಪಾಕಿಸ್ತಾನ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿಕರು ಸಾಗಿಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಒಟ್ಟು ಮೂರು ಬೋಗಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅದರಲ್ಲಿ 200 ಕ್ಕಿಂತ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂಧು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡವರನ್ನು ಕೂಡಲೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ನಂದಿಸಿರುವ ಬೋಗಿಗಳಿಂದ ಪ್ರಯಾಣಿಕರ ಶವಗಳನ್ನು ಹೊರತೆಗೆಯಲಾಗುತ್ತಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English