- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದ.ಕ.ದಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Srinivas-Poojary [1]
ಮಂಗಳೂರು : ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕನ್ನಡದ ಅಭಿವೃದ್ಧಿಗೆ ಆಶಾದಾಯಕ ಎಂದು ನಗರದ ನೆಹರು ಮೈದಾನದಲ್ಲಿ ನಡೆದ ಶುಕ್ರವಾರ ಬೆಳಗ್ಗೆ ನಡೆದ ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ  ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ  ಮಾತನಾಡುತ್ತಿದ್ದರು.

srinivas [2]ಪ್ರಸ್ತಾವಿತ ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಯಾವುದೇ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನ ಮಾಡಲು ಅವಕಾಶವುಂಟಾಗಿದೆ ಎಂದು ಸಚಿವರು ಹೇಳಿದರು. ಮನಾಪ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಂದಿನ ವರ್ಷ ನೀಡುವುದಾಗಿ ಅವರು ತಿಳಿಸಿದರು.

DK [3]DK [4]ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಡಾ.ಭರತ್ ಶೆಟ್ಟಿ, ಐವನ್ ಡಿಸೋಜ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ತುಳು ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅಪರ ಜಿಲ್ಲಾಧಿಕಾರಿ ರೂಪಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಮತ್ತಿತರರು ಉಪಸ್ಥಿತರಿದ್ದರು.

DK [5]DK [6]DK [7] ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಅಂಬೇಡ್ಕರ್ ವೃತ್ತದಿಂದ ಜ್ಯೋತಿ ವೃತ್ತದ ವರೆಗೆ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮೆರವಣಿಗೆಯನ್ನು ನಗರದ ಅಂಬೇಡ್ಕರ್ ವೃತ್ತದ ಬಳಿ ಸಮಾಜ ಸೇವಕಿ, ಪ್ರಜ್ಞಾ ಸಲಹಾ ಕೇಂದ್ರದ ನಿರ್ದೇಶಕಿ ಹೀಲ್ಡಾ ರಾಯಪ್ಪನ್ ಉದ್ಘಾಟಿಸಿದರು.

DK [8]ದ.ಕ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ನೆಹರೂ ಮೈದಾನದವರೆಗೆ ಹಮ್ಮಿಕೊಂಡ ಮೆರವಣಿಗೆಯಲ್ಲಿ ಕರಾವಳಿಯ ಹುಲಿವೇಷ, ಕರಂಗೋಲು, ಡೋಲು ನೃತ್ಯ ಸೇರಿದಂತೆ ಅರಣ್ಯ, ಆರೋಗ್ಯ ಇಲಾಖೆ, ತೋಟಗಾರಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳ ತಂಡ ಪಾಲ್ಗೊಂಡು ಮೆರುಗು ನೀಡಿದವು.

DK [9] DK4 [10]