ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನ

10:57 AM, Saturday, November 2nd, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Vaijanathಕಲಬುರಗಿ : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ವೈಜನಾಥ್ ಪಾಟೀಲ್(81) ಅವರು ಶನಿವಾರ ನಿಧನರಾಗಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಕನ್ನಿಂಗ್ಯಾಮ್ ರಸ್ತೆಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ.

1938ರಂದು ಬೀದರ್ ಜಿಲ್ಲೆಯ ಔರಸ್ನಲ್ಲಿ ಜನಸಿದ್ದರು. ಚಿಂಚೋಳಿಯ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪಾಟೀಲ್, ರಾಮಕೃಷ್ಣ ಹೆಗಡೆ ಮತ್ತು ಎಚ್ಡಿಡಿ ಅವಧಿಯಲ್ಲಿ‌ ಎರಡು ಬಾರಿ ಸಚಿವರಾಗಿ ಕೆಲಸ ಮಾಡಿದ್ದರು.

371 ಕಲಂ‌ ಹೈದ್ರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನಕ್ಕಾಗಿ ಹೊರಾಡಿದವರಲ್ಲಿ ಪಾಟೀಲ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಚಿಂಚೋಳಿ ತಾಲೂಕಿನ ತೋಟದಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English