ಉತ್ತರ ಕನ್ನಡ : ಮಾಂಸಕ್ಕಾಗಿ ಸ್ಥಳೀಯ ಅರಣ್ಯದಲ್ಲಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೊಮ್ಮಯ್ಯ ಹಳ್ಳೇರ ಬಂಧಿತ ಆರೋಪಿ. ಈತನಿಂದ ಪ್ರಾಣಿ ಮಾಂಸ ವಶಕ್ಕೆ ಪಡೆಯಲಾಗಿದೆ.
ಈತ ಗೋಕರ್ಣ ವ್ಯಾಪ್ತಿಯ ಅರಣ್ಯದಲ್ಲಿ ಮಾಂಸಕ್ಕಾಗಿ ಪ್ರಾಣಿಗಳನ್ನ ಬೇಟೆಯಾಡುತ್ತಿದ್ದ ಮಾಂಸ ಪ್ರಿಯರಿಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಈತನ ಹಿಂದೆ ದೊಡ್ಡ ಜಾಲವೇ ಇದೆ. ತನಿಖೆ ನಡೆಯುತ್ತಿದ್ದು ಶೀಘ್ರದಲ್ಲೇ ಎಲ್ಲ ಬೇಟೆಗಾರರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Click this button or press Ctrl+G to toggle between Kannada and English