ಮಮಪಾ ಚುನಾವಣೆ : ಟಿಕೆಟ್ ಆಕಾಂಕ್ಷಿಗಳ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ಶಿಸ್ತು ಕ್ರಮ; ಹರೀಶ್ ಕುಮಾರ್

1:31 PM, Monday, November 4th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Harish-Kumarಮಂಗಳೂರು : ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನ.12ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ನಾಮ ಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಪಾಲಿಕೆಯ ಎಲ್ಲಾ 60 ವಾರ್ಡ್ ಗಳಿಗೂ ಪಕ್ಷದ ಅಧಿಕೃತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದಲ್ಲಿ ಬಹುತೇಕ ಕಡೆ ಒಮ್ಮತದ ಅಭ್ಯರ್ಥಿ ಗಳನ್ನು ಆಯಾ ವಾರ್ಡ್ ಗಳ ಪ್ರಾದೇಶಿಕ ಅಂಶಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಕೆಲವು ಕಡೆ ಹೆಚ್ಚು ಆಕಾಂಕ್ಷಿಗಳು ಇದ್ದ ಕಡೆ ತಮ್ಮ ಅತೃಪ್ತಿಯನ್ನು ವ್ಯಕ್ತ ಪಡಿಸಿದ್ದಾರೆ. ಅವರನ್ನು ಸಮಾಧಾನ ಪಡಿಸಿ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗಿದೆ. ಮನಪಾ ಚುನಾವಣೆ ಪಕ್ಷಕ್ಕೆ ಪೂರಕವಾಗಿದೆ. ಪಕ್ಷದ ಒಬ್ಬ ಮಾಜಿ ಕಾರ್ಪೊರೇಟರ್ ಕಾಂಗ್ರೆಸ್‌ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿ ಸ್ಪರ್ಧಿಸುತ್ತಿ ದ್ದಾರೆ, ಹೊರತಾಗಿ ಪಕ್ಷದ ಕಾರ್ಯಕರ್ತರು ಪಕ್ಷ ತೊರೆದಿಲ್ಲ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

ಮಾಜಿ ಶಾಸಕರ ಮೇಲೆ ಹಲ್ಲೆ ನಡೆದಿರುವುದು ವಿಷಾದನೀಯ. ಹಲ್ಲೆ ಮಾಡಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಆಗಿದೆ. ಪಕ್ಷದ ವತಿಯಿಂದ ಈ ಬಗ್ಗೆ ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಹರೀಶ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರಕಾರ ಆರ್ ಸಿ ಇ ಪಿ ಒಡಂಬಡಿಕೆ ಜಾರಿ ಮಾಡಲು ಅವಕಾಶ ನೀಡುವುದರಿಂದ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಲಿದೆ ಎಂದು ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳಾದರಾದ ಸದಾಶಿವ ಉಳ್ಳಾಲ್, ಮುಸ್ತಾಫ, ಶುಭೋದಯ ಆಳ್ವ, ಅಬ್ಬಾಸ್ ಅಲಿ ಮೊದಲಾದವರು ಉಪಸ್ಥಿತರಿದ್ದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English