ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಾಯಿ, ಮಗಳು ಆತ್ಮಹತ್ಯೆ

9:42 AM, Tuesday, November 5th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Mysuru

ಮೈಸೂರು : ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿ ಮತ್ತು ಆಕೆಯ ಹನ್ನೊಂದು ವರ್ಷದ ಮಗಳು ಒಂದೇ ನೇಣಿನ ಕುಣಿಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯನಗರ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ತಾಯಿ ಜಯಾ(35) ಮಗಳು ಪ್ರಿಯಾ(11) ಎಂದು ಗುರುತಿಸಲಾಗಿದೆ.

ಪ್ರಿಯಾ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಲಿಫ್ಟ್ ಮೆಕ್ಯಾನಿಕ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೈಸೂರಿನ ಸುಧಾಕರ್ ಅವರು ಶಿವಮೊಗ್ಗದ ಜಯಾ ಅವರನ್ನು 12ವರ್ಷಗಳ ಹಿಂದೆ ವಿವಾಹವಾಗಿದ್ದರು. ಇವರು ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕೆಟ್ಟು ಹೋಗಿದ್ದ ಲಿಫ್ಟ್ ನ್ನು ಸುಧಾಕರ್ ದುರಸ್ತಿ ಮಾಡಲು ತೆರಳಿದ್ದರು.

ಭಾನುವಾರ ರಾತ್ರಿ ಅವರು ಮನೆಗೆ ವಾಪಸ್ ಬಂದಾಗ ತಾಯಿ ಮಗಳು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ. ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ವಿಜಯ ನಗರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಹೆಚ್.ಎನ್.ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇಲ್ನೋಟಕ್ಕೆ ಇದೊಂದು ಕೌಟುಂಬಿಕ ಕಲಹದಂತೆ ಕಂಡು ಬಂದಿದ್ದು, ಜಯಾ ಅವರ ತವರು ಮನೆಯವರು ಆಗಮಿಸಿದ ನಂತರವೇ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English