ಎಚ್.ಡಿ.ದೇವೇಗೌಡ-ಬಿಎಸ್‌ವೈ ಮಾತುಕತೆ ಗೊತ್ತಿಲ್ಲ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

10:55 AM, Wednesday, November 6th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

siddaramaiahh

ಉಡುಪಿ : ಎಚ್.ಡಿ.ದೇವೇಗೌಡ ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ನಡೆದಿದೆ ಎನ್ನಲಾದ ಫೋನ್ ಸಂಭಾಷಣೆ ಬಗ್ಗೆ ನನಗೇನೂ ಗೊತ್ತಿಲ್ಲ. ಮೈತ್ರಿ ಸರ್ಕಾರ ಪತನಕ್ಕೆ ಯಾರು ಕಾರಣರು ಎಂಬುದಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿ ಬುಧವಾರ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ಆಗಮಿಸಿದ ಅವರು ಕಾಪು ಸಾಯಿರಾಧಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಉಪಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಒಳ ಒಪ್ಪಂದ ಮಾಡಿಕೊಳ್ಳುತ್ತದೆಯೇ ಎಂಬುದು ನನಗೆ ಗೊತ್ತಿಲ್ಲ. ಇವರ ಒಳ ಒಪ್ಪಂದದ ಬಗ್ಗೆ ನಾನು ಏನೂ ಹೇಳಲ್ಲ. ನಾನೂ ಸಾಕಷ್ಟು ಊಹಾಪೋಹಗಳನ್ನು ಕೇಳುತ್ತಿದ್ದೇನೆ ಎಂದರು.

ಅನರ್ಹ ಶಾಸಕರ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ ಎಂದು ಹೇಳಲಾದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಈಗಾಗಲೇ ಯಡಿಯೂರಪ್ಪ ಅವರು ಆಡಿಯೋ ತನ್ನದೇ ಎಂದು ಒಪ್ಪಿಕೊಂಡಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅನರ್ಹ ಶಾಸಕರ ಪ್ರಕರಣದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ಕುಮ್ಮಕ್ಕು ರುವುದೂ ಬಹಿರಂಗೊಂಡಿದೆ. ಗೃಹಸಚಿವರೇ ಈ ರೀತಿ ಮಾಡಿದರೆ ಪ್ರಜಾಪ್ರಭುತ್ವ ಉಳಿಯುತ್ತದೆಯೇ ಎಂದು ಪ್ರಶ್ನಿಸಿದರು.
ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಪ್ರಮುಖರಾದ ಯು.ಆರ್.ಸಭಾಪತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಜತೆಗಿದ್ದರು.

ಪೂಜಾರಿಗೆ ನೋ ರಿಯಾಕ್ಷನ್  ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಶನಿ ಇದ್ದಂತೆ ಎಂಬ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿಕೆಗೆ, ‘ನೋ ರಿಯಾಕ್ಷನ್ ಟು ಮಿಸ್ಟರ್ ಜನಾರ್ದನ್ ಪೂಜಾರಿ’ ಎಂದಷ್ಟೇ ಸಿದ್ದರಾಮಯ್ಯ ಹೇಳಿದರು.

ಮನಪಾ ಕೈ ಪ್ರಣಾಳಿಕೆ ಬಿಡುಗಡೆ: ಸಿದ್ದರಾಮಯ್ಯ ನ.6ರಂದು ಮಂಗಳೂರಿನ ಮಲ್ಲಿಎಚ್.ಡಿ.ದೇವೇಗೌಡ-ಬಿಎಸ್‌ವೈ ಮಾತುಕತೆ ಗೊತ್ತಿಲ್ಲ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸಾಯಂಕಾಲ ಮಹಾನಗರ ಪಾಲಿಕೆ ಚುನಾವಣೆಯ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English