ಮಡಿಕೇರಿ : ಕುಶಾಲನಗರದ ಮುಳ್ಳುಸೋಗೆ ಗ್ರಾ.ಪಂ ವ್ಯಾಪ್ತಿಯ ಗೊಂದಿಬಸವನಹಳ್ಳಿ ಗ್ರಾಮದ ರಸ್ತೆ ಮಧ್ಯೆಯಿರುವ ವಿದ್ಯುತ್ ಕಂಬವನ್ನು ತೆರವುಗೊಳಿಸುವಂತೆ ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ರಸ್ತೆ ಮಧ್ಯೆ ವಿದ್ಯುತ್ ಕಂಬವಿದ್ದರೂ ರಸ್ತೆ ಕಾಮಗಾರಿಯನ್ನು ಮುಂದುವರಿಸಿರುವುದು ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಗ್ಗೆ ಮಾತನಾಡಿದ ಮುಳ್ಳುಸೋಗೆ ಗ್ರಾ.ಪಂ ಪಿಡಿಓ ರಾಜಶೇಖರ್, ಆದಷ್ಟು ಬೇಗನೇ ವಿದ್ಯುತ್ ಕಂಬವನ್ನು ಸ್ಥಳಾಂತರಿಸಲಾಗುವುದು ಎಂದರು.
ವಿದ್ಯುತ್ ಕಂಬ ಸ್ಥಳಾಂತರಿಸದಿದ್ದಲ್ಲಿ ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಯ ಮುಂಭಾಗ ಧರಣಿ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
Click this button or press Ctrl+G to toggle between Kannada and English