- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಕಸ್ಮಿಕ ಬೆಂಕಿ : ಕರಕಲಾದ ವಾಹನ

virajpete [1]

ಮಡಿಕೇರಿ : ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಸಂಪೂರ್ಣ ವಾಹನವೇ ಕರಕಲಾದ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.

ವೀರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದವರಾದ ನಂಬುಡುಮಾಡ ಮನು ಅವರು ಮೈಸೂರಿನಲ್ಲಿ ನೆಲೆಸಿದ್ದು, ಇವರು ಸಂಬಂಧಿಕರ ಮದುವೆಗೆಂದು ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ್ದರು. ಇವರು ನಿನ್ನೆ ಸಂಜೆ ಕಂಡಂಗಾಲದಿಂದ ವೀರಾಜಪೇಟೆಯಲ್ಲಿ ಆಯೋಜಿತ ಮದುವೆಗೆ ಆಗಮಿಸುತಿದ್ದ ವೇಳೆ ಕಂಡಂಗಾಲ – ಬಿ.ಶೆಟ್ಟಿಗೇರಿ ಮುಖ್ಯ ರಸ್ತೆ ಬಳಿ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೆ ಮನು ಅವರು ವಾಹನದಿಂದಿಳಿದಿದ್ದಾರೆ. ಕ್ಷಣ ಮಾತ್ರದಲ್ಲಿ ಬೆಂಕಿ ವಾಹನವನ್ನು ಆವರಿಸಿಕೊಂಡು ಇಡೀ ವಾಹನ ಸುಟ್ಟು ಕರಕಲಾಗಿತ್ತು.

ವಿಷಯ ತಿಳಿದು ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳೊಂದಿಗೆ ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರಾದರು, ಅಷ್ಟರಲ್ಲೆ ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.