ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ

11:10 AM, Friday, November 8th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Asheer

ಮಂಗಳೂರು : ಕಾವೂರಿನ ಪಂಜಿಮೊಗರು ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಕಾವೂರು ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ನಗದು ಸಹಿತ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಪಂಜಿಮೊಗರು ನಿವಾಸಿ ಆಶಿರ್ (23) ಎಂದು ಗುರುತಿಸಲಾಗಿದೆ. ಆತನಿಂದ ಗಾಂಜಾ ಸಹಿತಿ ನಗದು ಹಾಗು ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English