ಪುತ್ತೂರು : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೊರ್ವನನ್ನು ಪುತ್ತೂರು ಡಿವೈಎಸ್ಪಿ ನೇತೃತ್ವದ ವಿಶೇಷ ತಂಡವು ಗಾಂಜಾ ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕಂಬಳಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮುಹಮ್ಮದ್ ಹಾರಿಸ್ ಯಾನೆ ಹೌರಾ ಹಾರಿಸ್(26) ಬಂಧಿತ ಆರೋಪಿ. ಖಚಿತ ಮಾಹಿತಿಯನ್ನು ಆಧರಿಸಿ ಪುತ್ತೂರು ನಗರದ ಹೊರ ವಲಯದ ನೆಹರೂ ನಗರ ಎಂಬಲ್ಲಿ ಆರೋಪಿಯನ್ನು ಸೊತ್ತುಗಳ ಸಹಿತ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
ನೆಹರೂ ನಗರದ ರೈಲ್ವೆ ಸೇತುವೆ ಬಳಿಯ ಅಡ್ಡರಸ್ತೆಯಲ್ಲಿ ಈತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಎನ್ನಲಾಗಿದ್ದು, ಪ್ಲಾಸ್ಟಿಕ್ ಕವರ್‌ನಲ್ಲಿ ಹಾಕಿ ತನ್ನೊಂದಿಗೆ ಇರಿಸಿಕೊಂಡಿದ್ದ 120 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಡಿವೈಎಸ್ಪಿ ದಿನಕರ ಶೆಟ್ಟಿ ನೇತೃತ್ವದ ವಿಶೇಷ ತಂಡ ಮತ್ತು ಪುತ್ತೂರು ನಗರ ಠಾಣೆ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್ಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
Click this button or press Ctrl+G to toggle between Kannada and English