ಅಯೋಧ್ಯೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು : ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

12:34 PM, Saturday, November 9th, 2019
Share
1 Star2 Stars3 Stars4 Stars5 Stars
(No Ratings Yet)
Loading...

rama-mandira

ನವದೆಹಲಿ : ಅಯೋಧ್ಯೆಯಲ್ಲಿನ 2.77 ಎಕರೆ ಭೂಮಿ ಹಕ್ಕು ಹಿಂದೂಗಳಿಗೆ ಸೇರಿದ್ದು, ಮಸೀದಿ ನಿರ್ಮಾಣಕ್ಕೆ 5 ಎಕರೆ ಪ್ರತ್ಯೇಕ ಜಾಗ ನೀಡಬೇಕೆಂದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ರಂಜನ್ ಗೊಗೋಯ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನಿಕಾ ಪೀಠ ಸರ್ವ ಸಮ್ಮತದ ತೀರ್ಪು ಪ್ರಕಟಿಸಿದೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ ಎಂದು ತಿಳಿಸಿದೆ.

ಮುಸ್ಲಿಮರಿಗೆ 5 ಎಕರೆ ಪರ್ಯಾಯ ಭೂಮಿ ನೀಡಬೇಕು. ದೇವಸ್ಥಾನ ನಿರ್ಮಾಣಕ್ಕೆ 3 ತಿಂಗಳಲ್ಲಿ ಸಮಿತಿ ರಚಿಸಬೇಕು. ರಾಮ ಮಂದಿರ ನಿರ್ಮಾಣ ಹೊಣೆ ಕೇಂದ್ರ ಸರ್ಕಾರಕ್ಕೆ ಸೇರಿದ್ದು, ದೇವಸ್ಥಾನ ನಿರ್ಮಾಣಕ್ಕೆ ಟ್ರಸ್ಟ್ ಸ್ಥಾಪಿಸಬೇಕು. ವಿವಾದಿತ 2.77 ಎಕರೆಯಲ್ಲಿ ಕೇವಲ ರಾಮಲಲ್ಲಾಗಷ್ಟೇ ಅಧಿಕಾರವಿದೆ.

ಬಾಬ್ರಿ ಮಸೀದಿ ಭೂಮಿ ಮಾಲೀಕತ್ವ ಶಿಯಾ ವಕ್ಫ್ ಬೋರ್ಡ್‍ಗೆ ಒಳಪಟ್ಟಿದ್ದಲ್ಲ ಮತ್ತು ಹಕ್ಕಿಲ್ಲ. ಬಾಬರ್ ಕಮಾಂಡರ್ ಮೀರ್ ಬಾಕಿ ಬಾಬ್ರಿ ಮಸೀದಿ ನಿರ್ಮಿಸಿದ್ದಾನೆ. ಜನರ ಧಾರ್ಮಿಕ ನಂಬಿಕೆಗಳನ್ನು ಗೌರವಿಸ್ತೇವೆ. ಪೂಜೆ ಮಾಡುವವರ ಹಕ್ಕನ್ನು ಮಾನ್ಯ ಮಾಡಿದ್ದೇವೆ.

ಹಿಂದೂ ದೇವಾಲಯ ನಾಶದ ಬಗ್ಗೆ ಸಾಕ್ಷ್ಯ ಇಲ್ಲ. 2ನೇ ಶತಮಾನದಲ್ಲಿ ದೇವಸ್ಥಾನ ಇದ್ದ ಬಗ್ಗೆ ಸಾಕ್ಷಿ ಇದೆ. ಕೇವಲ ಪುರಾತತ್ವ ಸಾಕ್ಷ್ಯವನ್ನಷ್ಟೇ ಅವಲಂಬಿಸಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದ ಎನ್ನುವ ನಂಬಿಕೆ ಅವಿವಾದಿತ.

ರಾಮನ ಮೂರ್ತಿ ಇಟ್ಟ ವಿಚಾರದಲ್ಲಿ ಸುನ್ನಿ ವಕ್ಫ್ ಬೋರ್ಡ್ ವಾದವನ್ನು ಮಾನ್ಯ ಮಾಡುತ್ತೇವೆ. 1949ರಲ್ಲಿ ರಾಮನ ಮೂರ್ತಿ ಇಡಲಾಗಿತ್ತು. 1856ರವರೆಗೆ ನಮಾಜ್ ಮಾಡಲಾಗಿತ್ತು ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ.

ಮಸೀದಿಯ ಕೆಳಗಡೆ ಹಿಂದೂ ರಚನೆ ಇದೆ ಅಂತ ನಂಬಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಹಿಂದೂ-ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಬ್ರಿಟೀಷರು ಆ ಜಾಗವನ್ನು ಪ್ರತ್ಯೇಕಿಸಿ ಬೇಲಿ ಹಾಕಿಸಿದ್ದರು. ಮಸೀದಿಯ ಒಳಗೆ ಮುಸ್ಲಿಮರು, ಆವರಣದಲ್ಲಿ ಹಿಂದೂಗಳು ಪ್ರಾರ್ಥನೆ ಮಾಡುತ್ತಿದ್ದರು.

ಮಸೀದಿಯ ಒಳಭಾಗದ ಬಗ್ಗೆಯೂ ವಿವಾದವಿದೆ. ಭೂ ಮಾಲೀಕತ್ವ ನಂಬಿಕೆ ಮೇಲೆ ಆಗುವುದಿಲ್ಲ. ಬಾಬ್ರಿ ಮಸೀದಿ ಧ್ವಂಸ ಪ್ರಾರ್ಥನೆ ಹಕ್ಕಿನ ಉಲ್ಲಂಘನೆ. ಅಲಹಾಬಾದ್ ಕೋರ್ಟ್ ಮೂವರು ಅರ್ಜಿದಾರರಿಗೆ ಸಮಾನವಾಗಿ ಮೂರು ಭಾಗವಾಗಿ ಹಂಚಿಕೆ ಮಾಡಿ ತೀರ್ಪು ನೀಡಿದ್ದು ತಪ್ಪು. ಸಂವಿಧಾನದ ಮುಂದೆ ಎಲ್ಲಾ ಧರ್ಮಗಳೂ ಒಂದೇ. ಜಡ್ಜ್ ಗಳಿಗೆ ಎಲ್ಲಾ ಧರ್ಮಗಳು ಒಂದೇ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English