ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಸ್ಥಾನವಾದ ಮಡಿಕೇರಿ ನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಒತ್ತಾಯಿಸಿದ್ದಾರೆ.
ಮಡಿಕೇರಿಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲಾ ಪ್ರಮುಖ ನಗರಗಳಲ್ಲಿ ಡಾ.ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಿ ಸಂವಿಧಾನ ಶಿಲ್ಪಿಗೆ ಗೌರವವನ್ನು ಸೂಚಿಸಲಾಗಿದೆ. ಮಡಿಕೇರಿಯಲ್ಲಿ ಪ್ರತಿಮೆ ಸ್ಥಾಪಿಸಬೇಕೆನ್ನುವ ಬೇಡಿಕೆಯ ಬಗ್ಗೆ ಸಮಿತಿ ಹಲವು ಬಾರಿ ಮನವಿ ಸಲ್ಲಿಸಿ, ಪ್ರತಿಭಟನೆ ನಡೆಸಿದ್ದರೂ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ಮನೋಭಾವ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.
ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಳ್ಳದಿದ್ದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಸಂಘಟನೆಯೇ ಪ್ರತಿಮೆ ಸ್ಥಾಪಿಸಲಿದೆ ಎಂದು ದಿವಾಕರ್ ಹೇಳಿದ್ದಾರೆ.
Click this button or press Ctrl+G to toggle between Kannada and English