ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ : ರಕ್ತದಾನ ಮಾಡಿ ಜೀವ ಉಳಿಸಲು ಶಾಸಕ ಅಪ್ಪಚ್ಚು ರಂಜನ್ ಕರೆ

9:37 AM, Wednesday, November 13th, 2019
Share
1 Star2 Stars3 Stars4 Stars5 Stars
(5 rating, 1 votes)
Loading...

Raktha-daana

ಮಡಿಕೇರಿ : ಯುವಜನರು ಪೌಷ್ಟಿಕ ಆಹಾರ ಸೇವಿಸಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಿ. ಇದರಿಂದ ಬೇರೆಯವರ ಪ್ರಾಣ ಉಳಿಸುವುದಲ್ಲದೆ, ತಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತ ನಿದಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಕೊಡವ ಸಮಾಜ ಪೊಮ್ಮಕಡ ಒಕ್ಕೂಟ, ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ಕೊಡಗು ಸರ್ಕಾರಿ ಐ.ಟಿ.ಐ ಕಾಲೇಜು, ಕಿರಿಯ ಮಹಿಳಾ ಆರೋಗ್ಯ ತರಬೇತಿ ಕೇಂದ್ರ, ಗ್ರೀನ್ ಡಾಟ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯ ’ಜೀವಿತಾವಧಿಯಲ್ಲಿ ಒಮ್ಮೆಯಾದರು ರಕ್ತದಾನ ಮಾಡಿ’ ಎಂಬ ಘೋಷವಾಕ್ಯದೊಂದಿಗೆ ಮಂಗಳವಾರ ನಗರದ ಕೊಡವ ಸಮಾಜದಲ್ಲಿ ನಡೆಯಿತು.

ವಾಹನ ಚಾಲನೆ ಸಂದರ್ಭದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೆಲ್ಮೆಟ್ ಕಡ್ಡಾಯವಾಗಿ ಬಳಸುವಂತಾಗಬೇಕು. ಇಲ್ಲದಿದ್ದಲ್ಲಿ ತಲೆಭಾಗಕ್ಕೆ ಗಾಯವಾಗುತ್ತದೆ. ಇದರಿಂದ ರಕ್ತಸ್ರಾವವಾಗುತ್ತದೆ. ಆದ್ದರಿಂದ ಎಲ್ಲರೂ ಪ್ರಥಮ ಚಿಕಿತ್ಸೆ ಕಲಿಯಬೇಕು ಎಂದು ಶಾಸಕರು ಸಲಹೆ ಮಾಡಿದರು.

ಯೋಗ, ವ್ಯಾಯಾಮವನ್ನು ಪ್ರತಿನಿತ್ಯ ಮಾಡುವುದರಿಂದ ಯಾವುದೇ ಕಾಯಿಲೆ ಬರುವುದಿಲ್ಲ. ಆರೋಗ್ಯವೇ ಭಾಗ್ಯ. ಆದ್ದರಿಂದ ಆರೋಗ್ಯ ಕಾಪಾಡಿಕೊಳ್ಳಿ, ಶ್ರಮದಿಂದ ಕೆಲಸ ಮಾಡಿದರೆ ಗೆಲುವು ಇರುತ್ತದೆ ಎಂದರು.

ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಅವರು ಮಾತನಾಡಿ ರಕ್ತದಾನ ಮಹಾದಾನ. ರಕ್ತದಾನದಿಂದ ರೋಗಿಗಳಿಗೆ ಸರಿಯಾದ ಸಮಯಕ್ಕೆ ರಕ್ತ ಒದಗಿಸಲು ಸಹಕಾರಿಯಾಗುತ್ತದೆ. ಇದರಿಂದ ಪ್ರಾಣ ಉಳಿಸಬಹುದು ಎಂದು ಅವರು ಹೇಳಿದರು.

ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಯುವಜನರು ರಕ್ತದಾನ ಮಾಡುವ ಗುಣವನ್ನು ಬೆಳಸಿಕೊಳ್ಳಬೇಕು. ಇದರಿಂದ ಆರೋಗ್ಯವಂತರಾಗಿರಬಹುದು ಎಂದು ಡಾ.ಆನಂದ್.ಎನ್ ಅವರು ಹೇಳಿದರು.

ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅವರು ಮಾತನಾಡಿ 18-60 ವರ್ಷದವರೆಗೆ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಿದರೆ ದೇಹದಲ್ಲಿ ಕೊಬ್ಬಿನಾಂಶ ಕಡಿಮೆಯಾಗುತ್ತದೆ ಹಾಗೂ ಖಾಯಿಲೆಗಳು ಬಾರದಂತೆ ರಕ್ಷಿಸುತ್ತದೆ ಎಂದು ಅವರು ಹೇಳಿದರು.

ಅತಿ ಹೆಚ್ಚು ರಕ್ತದಾನ ಮಾಡಿರುವ ಸುದೀಂದ್ರ ಅವರು 28 ಬಾರಿ, ಡಾ.ಆನಂದ್ 13 ಬಾರಿ ಹಾಗೂ ಭಾಗ್ಯಲಕ್ಷ್ಮೀ ಅವರು 7 ಬಾರಿ ಅವರನ್ನು ಸನ್ಮಾನಿಸಿದರು ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಗೆದ್ದಿರುವ ಐಟಿಐ ಕಾಲೇಜಿನ ವಿದ್ಯಾರ್ಥಿಗಳಾದ ಚೇತನ್ ಕೆ.ಎನ್, ಕಾರ್ತಿಕ್ ನಾಚಪ್ಪ, ನೂತನ್ ಎನ್.ಎನ್ ಅವರಿಗೆ ಬಹುಮಾನ ವಿತರಿಸಿದರು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English