ಮಂಗಳೂರು: ಮಂಗಳವಾರ ಮಂಗಳೂರಿಗೆ ಭೇಟಿ ಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡ್ಡಿಯೂರಪ್ಪನವರು ಬಿಜೆಪಿ ಪಕ್ಷವನ್ನು ಬಿಟ್ಟು ಹೊಸ ಪಕ್ಷವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿಲ್ಲ, ಒಂದು ವೇಳೆ ಯಡ್ಡಿಯೂರಪ್ಪನವರು ಬಿಜೆಪಿಯಿಂದ ಹೊರನಡೆದರೆ ಅದರಿಂದ ಅವರಿಗೆ ನಷ್ಟವೇ ಹೊರತು ಪಕ್ಷಕ್ಕೆ ಯಾವ ನಷ್ಟವೂ ಇಲ್ಲ, ಅವರ ಹೊರತಾಗಿಯೂ ಪಕ್ಷ ಇನ್ನಷ್ಟು ಬಲಿಷ್ಟವಾಗಿ ಬದುಕಲಿದೆ ಎಂದರು. ಬಿಜೆಪಿ ಪಕ್ಷಕ್ಕೆ ದ್ರೋಹ ಮಾಡಿದರೆ ಅದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ ಎಂದು ಯಡ್ಡಿಯೂರಪ್ಪನವರ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಯವರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜ್ಯ ಸರಕಾರದ ವಿರುದ್ಧ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಕೇಂದ್ರ ಸರಕಾರ ತನ್ನ ತಪ್ಪುಗಳನ್ನು ಮುಚ್ಚಿ ಹಾಕುವ ಭರದಲ್ಲಿ ರಾಜ್ಯ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದರು. ಕೇಂದ್ರ ಸರಕಾರದ ವಿರುದ್ಧ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಮುಖಂಡರು ಲೋಕಸಭಾ ಚುನಾವಣೆಗಳಲ್ಲಿ 100 ದಿನಗಳೊಳಗೆ ದೇಶಕ್ಕೆ ಕಪ್ಪು ಹಣವನ್ನು ಮರಳಿ ತರುವ ಭರವಸೆ ನೀಡಿದ್ದರು, ಆದರೆ 1,200 ದಿನಗಳು ಮುಗಿದರು ಅದು ಮರಳಿ ಬಂದಿಲ್ಲ ಎಂದರು.
ಭಷ್ಟಾಚಾರದ ವಿರುದ್ಧ ದನಿ ಎತ್ತಿದ ರಾಮ್ ದೇವ್ ಹಾಗೂ ಅಣ್ಣಾ ಹಜಾರೆಯವರನ್ನು ಬೇರೆ ಬೇರೆ ಮಾಡಿದರು, ದೇಶದ ಪ್ರಧಾನ ಮಂತ್ರಿ ಮನ್ಮೋಹನ್ ಸಿಂಗ್ ನೆಹರೂ ಕುಟುಂಬದ ರಾಜಕೀಯ ಚಟುವಟಿಕೆಗಳಿಂದ ಕಳೆ ಗುಂದುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಎಮ್. ಪಿ ಮೋನಪ್ಪ ಭಂಡಾರಿ, ಶ್ರೀಕಾರ್ ಪ್ರಭು, ನಳಿನ್ ಕುಮಾರ್ ಕಟೀಲ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English