ನವದೆಹಲಿ : ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರ ಸೆಪ್ಟಂಬರ್ 28ರಂದು ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಗುರುವಾರ ಅಂಗೀಕರಿಸಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಸಲ್ಲಿಕೆಯಾದ ಮರುಪರಿಶೀಲನೆ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 3:2 ಬಹುಮತದಿಂದ ಪಂಚಸದಸ್ಯ ಪೀಠ ಪೂರ್ಣಪೀಠಕ್ಕೆ ನೀಡಿದೆ.
ತೀರ್ಪು ಹಿಂದೂ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ.ಮುಸ್ಲಿಮರು, ಪಾರ್ಸಿಗಳ ವಿಚಾರವೂ ಇದೆ. ಇದು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವಿಚಾರವೂ ಇದರಲ್ಲಿದೆ. ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಬೇಕಾಗಿದೆ ಎಂದು ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.
Click this button or press Ctrl+G to toggle between Kannada and English